ದಲಿತರ ಹಣ ದುರ್ಬಳಕೆ, ಬಡವರ ಹೊಟ್ಟೆ ಮೇಲೆ ಹೊಡೆದ ಕಾಂಗ್ರೆಸ್ ಸರ್ಕಾರ ತೊಲಗಲಿ-ಅಂಬಿಕಾ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ‌:
ಗ್ಯಾರಂಟಿ ಹೆಸರಿನಲ್ಲಿ ದಲಿತರ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಂಡು ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ, ಕಚೇರಿ ಬಳಿ ಬೃಹತ್ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ಹೊರಹಾಕಿದರು.

ರಾಜ್ಯ ಬಿಜೆಪಿ ಕಾರ್ಯದರ್ಶಿ ಅಂಬಿಕಾ ಹುಲಿ ನಾಯ್ಕರ್ ಮಾತನಾಡಿ ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದುಳಿದ ಸಮುದಾಯಗಳಿಗೆ ಆರ್ಥಿಕ ಶಕ್ತಿ ಕೊಟ್ಟು ಅವರನ್ನು ಮುಂದಕ್ಕೆ ತರುವ ಕೆಲಸ ಮಾಡಲು ಸಾಧ್ಯ ವಾಗುತ್ತಿಲ್ಲ. ಮುಸ್ಲಿಂ ಸಮುದಾಯವನ್ನು ಓಲೈಸಲು ಹೊರಟ ಕಾಂಗ್ರೆಸ್ ಸರಕಾರ, ಇತರೆ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಲು ಹೊರಟಿದೆ. ಸಿದ್ದರಾಮಯ್ಯನವರು ನಿಜವಾಗಿಯೂ ಅಹಿಂದ ನಾಯಕರೇ ಆಗಿದ್ದರೆ ಇಷ್ಟೊತ್ತಿಗೆ ಅನೇಕ ಹಿಂದುಳಿದ ಸಮಾಜಗಳಿಗೆ ಆರ್ಥಿಕ ಶಕ್ತಿ ತುಂಬಬೇಕಿತ್ತು. ಬಡವರ ಹೊಟ್ಟೆ ಮೇಲೆ ಹೊಡೆದ ಕಾಂಗ್ರೆಸ್ ಸರ್ಕಾರ ತೊಲಗಬೇಕು. ರಾಜ್ಯ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕಾರ್ಯಕ್ಕೆ ಮೀಸಲಿಟ್ಟ ಎಲ್ಲ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಕೊಟ್ಟಿದೆ ಎಂದು ಆರೋಪಿಸಿದರು.

ಖನಿಜ ನಿಗಮದ ಮಾಜಿ ಅಧ್ಯಕ್ಷ ಲಿಂಗಮೂರ್ತಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ತನ್ನ ಅಧಿಕಾರದ ಅವಧಿಯಲ್ಲಿ ದಲಿತರಿಗಾಗಿ ಮೀಸಲಿಟ್ಟಿದ್ದ ಹಣ ಗ್ಯಾರಂಟಿಗಳಿಗೆ ಖರ್ಚು ಮಾಡಿದೆ. ಸರ್ಕಾರದಲ್ಲಿ ದುಡ್ಡಿಲ್ಲ, ಬೊಕ್ಕಸ ಖಾಲಿಯಾದ ಕಾರಣ ದಲಿತರ ಉದ್ದಾರಕ್ಕೆ ಮೀಸಲಾಗಿಟ್ಟಿದ್ದ ಹಣವನ್ನು ಗ್ಯಾರಂಟಿಗಳಿಗೆ ಬಳಸುತ್ತಿದ್ದಾರೆ. ನಾನು ಸಿದ್ದಣ್ಣ, ಲೂಟಿ ಗ್ಯಾರಂಟಿ ಅಣ್ಣಾ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದರು.

ರಾಜ್ಯ ಭಿಕ್ಷೆ ಬೇಡುವ ಸ್ಥಿತಿಗೆ ಸಿದ್ದರಾಮಯ್ಯನವರು ತಂದು ನಿಲ್ಲಿಸಿದ್ದಾರೆ. ಸಿದ್ದರಾಮಯ್ಯನವರು ಸಾಲದ ವಿಚಾರದಲ್ಲೂ ಚಾಂಪಿಯನ್ ಎಂದು ಆರೋಪಿಸಿದರು.
ಎಲ್ಲ ನಿಗಮ
, ತಾಂಡಾ ಅಭಿವೃದ್ಧಿ ನಿಗಮಗಳಿಗೆ ಕನಿಷ್ಠ ಮೊತ್ತವನ್ನು ಮನೆಹಾಳ ಕಾಂಗ್ರೆಸ್ ಸರ್ಕಾರ ನೀಡಿದೆ ಎಂದು ಆರೋಪಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಬುಡಕಟ್ಟು ಜನಾಂಗ, ಅಲೆಮಾರಿ, ಅರೆಅಲೆಮಾರಿಗಳ ಅಭ್ಯುದಯಕ್ಕಾಗಿ ಮೀಸಲಿಟ್ಟಿರುವ ಹಣವನ್ನು ರಾಜ್ಯ ಸರ್ಕಾರ ಅನ್ಯ ಉದ್ದೇಶಕ್ಕಾಗಿ ಬಳಸುತ್ತಿರುವುದು ಅಕ್ಷಮ್ಯ ಅಪರಾಧ. ಹಾಗಾಗಿ ಈ ಬಾರಿಯ ಬಜೆಟ್‌ನಲ್ಲಿ ಎಸ್ಸಿಪಿ ಟಿಎಸ್ಪಿ ಹಣ ಬೇರೆ ಉದ್ದೇಶಗಳಿಗೆ ಬಳಸುವುದಿಲ್ಲವೆಂದು ನಿರ್ಣಯ ಕೈಗೊಳ್ಳುವಂತೆ ಅವರು ಒತ್ತಾಯಿಸಿದರು. 

ಸಂಸದರು ಹಾಗೂ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಶಾಸಕಸರಾದ ಎಸ್.ಕೆ.ಬಸವರಾಜನ್, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಖಂಜಾಚಿ ಮಾಧುರಿ ಗೀರಿಶ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್ ಯಾದವ್, ಸೋಮನಾಥ್, ಮೋಹನ್, ಯೋಗಿಶ್ ಸಹ್ಯಾದ್ರಿ, ಹನುಮಂತಪ್ಪ, ಎಸ್ಸಿ ಮೋರ್ಚಾ ಹನುಮಂತಪ್ಪ, ಓಬಳೇಶ್, ಓ.ಬಿ.ಸಿ.ಮೋರ್ಚಾದ ನರೇಂದ್ರ, ರಂಗಪ್ಪ, ಎಸ್ಸಿ ಮೋರ್ಚಾ ಶಿವಣ್ಣ, ಮಾಧ್ಯಮ ವಕ್ತಾರ ದಗ್ಗೆ ಶಿವಪ್ರಕಾಶ್, ಬೇದ್ರೆ ನಾಗರಾಜ್, ಛಲವಾದಿ ತಿಪ್ಪೇಸ್ವಾಮಿ, ಜಯಪಾಲಯ್ಯ, ಕುಮಾರಸ್ವಾಮಿ, ರಾಮದಾಸ್, ಶಿವಣ್ಣ, ತಿಪ್ಪೇಸ್ವಾಮಿ, ರಘುಮೂರ್ತಿ, ಬಸಮ್ಮ, ಕಾಂಚನಾ, ಅಂಬಿಕಾ ಶಂಭು, ಲೋಕೇಶ್ ನಾಗರಾಜ್ ಸೇರಿದಂತೆ ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು, ದಲಿತ ಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಇದಕ್ಕೂ ಮುನ್ನ ನಗರದ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ದ ಘೋಷಣೆ ಕೂಗಿದರು.   

 

Share This Article
error: Content is protected !!
";