ಪಾಕಿಸ್ತಾನದ ವಿರುದ್ಧ ಕೇಂದ್ರ ಸರ್ಕಾರ ಕೈಗೊಳ್ಳುವ ತೀರ್ಮಾನ ಕಾಂಗ್ರೆಸ್ ಬದ್ಧ

News Desk

ಚಂದ್ರವಳ್ಳಿ ನ್ಯೂಸ್, ಬೆಳಗಾವಿ :
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​​ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಣಯಕ್ಕೆ ಕಾಂಗ್ರೆಸ್ ಬದ್ಧ ಎಂದು ಆಹಾರ
, ನಾಗರಿಕ ಸರಬರಾಜು ಮತ್ತು ಗ್ರಾಹಕರ‌ವ್ಯವಹಾರಗಳ ಇಲಾಖೆಯ ಸಚಿವ ಕೆ. ಹೆಚ್. ಮುನಿಯಪ್ಪ ಹೇಳಿದರು.

ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ಒಮ್ಮತದ ಬೆಂಬಲ ಕೊಡುವುದಾಗಿ ಈಗಾಗಲೇ ಹೇಳಿದ್ದಾರೆ. ಹಾಗಾಗಿ, ನಮಗೆ ಮೊದಲು ದೇಶ ಮುಖ್ಯ. ಪಾಕಿಸ್ತಾನದವರು ಪ್ರಚೋದಿಸುವ ಕೆಲಸ ಮಾಡಿದ್ದು, ಖಂಡನೀಯ ಎಂದು ಹೇಳಿದರು.

ದೇಶದಲ್ಲಿ ಭಯೋತ್ಪಾದಕ ಘಟನೆಗಳು ನಡೆಯಬಾರದು. ಇಂಥ ಘಟನೆಗಳು ಸಂಭವಿಸಿದಾಗ ಪಕ್ಷಾತೀತವಾಗಿ ಎಲ್ಲರೂ ಖಂಡಿಸಬೇಕಿತ್ತು. ಕೇಂದ್ರ ಸರ್ಕಾರ ಭಯೋತ್ಪಾದಕರ ಮೇಲೆ ಕ್ರಮ ಜರುಗಿಸಬೇಕು.‌ಮುಖ್ಯಮಂತ್ರಿ ಸಿದ್ದರಾಮಯ್ಯ ಯುದ್ಧ ಬೇಡ ಎಂದು ನೀಡಿದ ಹೇಳಿಕೆಗೆ ಅವರೇ‌ಈಗಾಗಲೇ ಉತ್ತರ ಕೊಟ್ಟಿದ್ದಾರೆ. ಇದರಲ್ಲಿ ರಾಜಕೀಯ ಮಾಡಬಾರದು ಎಂದು ಸಚಿವ ಮುನಿಯಪ್ಪ ತಿಳಿಸಿದರು.

ಕೇಂದ್ರ ಸರ್ಕಾರದ ಬೆಲೆ ಏರಿಕೆಯ ವಿರುದ್ಧ ಕಾಂಗ್ರೆಸ್ಸಿನವರಾದ ನಾವು ಪ್ರತಿಭಟಿಸುತ್ತಿದ್ದೇವೆ. ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿದೆ. ಇದರ ಅವಶ್ಯಕತೆ ಏನಿದೆ?. ಇದರ ಹಣ ಎಲ್ಲಿ ಹೋಗುತ್ತಿದೆ ಎಂದು ಸೂಕ್ತ ಕಾರಣದೊಂದಿದೆ ಲೆಕ್ಕ ಕೊಡಬೇಕು. ಕೇಂದ್ರ ಸರ್ಕಾರ ರಾಷ್ಟ್ರದ ಹಿತ ದೃಷ್ಟಿಯಿಂದ ಬೆಲೆ ಏರಿಕೆ ಹಿಂಪಡೆಯಬೇಕು ಎಂದು‌ಸಚಿವರು ಆಗ್ರಹ ಮಾಡಿದರು.

 

 

Share This Article
error: Content is protected !!
";