ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಸಂಭವಿಸುತ್ತಿದ್ದರೂ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಕನ್ನಡಿಗರ ಹಿತ ಮರೆತು ಅಧಿಕಾರದ ಗದ್ದುಗೆಗಾಗಿ ಡಿನ್ನರ್, ಮಿಡ್‌ನೈಟ್‌ಮೀಟಿಂಗ್‌ನಲ್ಲಿ ಮುಳುಗಿದ್ದಾರೆ ಕರ್ನಾಟಕ ಕಾಂಗ್ರೆಸ್ ನಾಯಕರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ.
ರಾಜ್ಯದ ಜನತೆ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡಿದ್ದರೂ ಅಧಿಕಾರ ಹಂಚಿಕೆ ಕುರಿತು ಚರ್ಚೆ ಮುಖ್ಯವಾಗಿದೆಯೇ ಹೊರತು ಅಭಿವೃದ್ಧಿ ವಿಚಾರ ಪ್ರಮುಖವಾಗಿಲ್ಲ, ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ.
ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳನ್ನು ನೋಡಲು ಸಾಧ್ಯವಾಗದ ಸ್ಥಿತಿಯಿದೆ. ಭ್ರಷ್ಟ ಸರ್ಕಾರದ ನಿರ್ಲಕ್ಷ್ಯ ನಡೆಗೆ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.