Ad imageAd image

ಕೃಷ್ಣಾ ಮೇಲ್ದಂಡೆ ಯೋಜನೆ ರಾಜಕೀಯ‌ ಅಸ್ತಿತ್ವಕ್ಕೆ ಬಳಸಿದ ಕಾಂಗ್ರೆಸ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ತನ್ನ ರಾಜಕೀಯ‌ಅಸ್ತಿತ್ವ ಉಳಿಸಿಕೊಳ್ಳಲು ಕರ್ನಾಟಕ ಕಾಂಗ್ರೆಸ್ ಬಳಸಿಕೊಂಡಿತ್ತು. ಕಾಂಗ್ರೆಸ್ ನಡಿಗೆ – ಕೃಷ್ಣೆಯ ಕಡೆಗೆ ಎಂಬ ಪಾದಯಾತ್ರೆ ಹಮ್ಮಿಕೊಂಡು ಜನರಿಗೆ ಭರವಸೆಗಳ ಮಹಾಪೂರವನ್ನೇ ಹರಿಸಿದ್ದರು. ಜಾಹೀರಾತುಗಳಲ್ಲಿ
, ಸಾರ್ವಜನಿಕ ಸಭೆಗಳಲ್ಲಿ ನುಡಿದಂತೆ ನಡೆದಿದ್ದೇವೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದ ಕಾಂಗ್ರೆಸ್ ನಾಯಕರು ಮಾತ್ರ ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರದಲ್ಲಿ ಅಕ್ಷರಶಃ ತದ್ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ವಾಗ್ದಾಳಿ ಮಾಡಿದೆ.

ಅಂದು ಕೃಷ್ಣೆಯ ಕಡೆಗೆ – ನಮ್ಮ ನಡಿಗೆ‌ಹೋರಾಟ ಕೈಗೊಂಡು ಕೃಷ್ಣಾ ಮೇಲ್ದಂಡೆ ಯೋಜನೆಗಳನ್ನು ಪೂರ್ಣಗೊಳಿಸಲು ವಾರ್ಷಿಕ ಹತ್ತು ಸಾವಿರ ಕೋಟಿ ಅನುದಾನ ನೀಡುತ್ತೇನೆ ಎಂದು ಸಿದ್ದರಾಮಯ್ಯ ಭಾಷಣ ಬಿಗಿದಿದ್ದರು. ಅಂದರೆ ಐದು ವರ್ಷದಲ್ಲಿ ಐವತ್ತು ಸಾವಿರ ಕೋಟಿ ನೀಡುವ ವಾಗ್ದಾನವದು. ಕೃಷ್ಣಾ ಮೇಲ್ದಂಡೆಗೆ ವಾರ್ಷಿಕ ಹತ್ತು ಸಾವಿರ ಕೋಟಿ ಅನುದಾನ ಅಸಾಧ್ಯ ಎಂದು ಪತ್ರಿಕೆಗಳು ಅಂದೇ ಬರೆದಿದ್ದವು. ಆದರೆ ಕೂಡಲಸಂಗಮದಲ್ಲಿ ನಿಂತು ಭಾಷಣ ಮಾಡುವಾಗ ಸಿದ್ದರಾಮಯ್ಯ ಅವರು ಮಾಧ್ಯಮಗಳನ್ನೇ ತರಾಟೆಗೆ ತೆಗೆದುಕೊಂಡು ಅನುದಾನ ನೀಡಲು ಸಾಧ್ಯವಿದೆ ಎಂದಿದ್ದರು‌. ಆದರೆ, ಅಧಿಕಾರಕ್ಕೆ ಬಂದ ಬಳಿಕ ಕೃಷ್ಣೆಯನ್ನೇ ಮರೆತರು ಎಂದು ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿ ಕಾರಿದೆ.

ನಾವು ಅಧಿಕಾರಕ್ಕೆ ಬಂದರೆ ಪ್ರತೀ ವರ್ಷ ಕೃಷ್ಣಾ ಮೇಲ್ದಂಡೆ ಯೋಜನೆಗೆ 10 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟು ಐದು ವರ್ಷಗಳಲ್ಲಿ 50 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಿ ಯೋಜನೆ ಪೂರ್ಣಗೊಳಿಸುತ್ತೇವೆ ಎಂದು ಕೂಡಲ ಸಂಗಮನಾಥನ ಮೇಲೆ ಆಣೆ ಪ್ರಮಾಣ ಮಾಡಿ ಕಾಯಿಕಟ್ಟಿ ಕಾಂಗ್ರೆಸ್ ನಾಯಕರು ಪ್ರಮಾಣ ಮಾಡಿದ್ದರು ಮತ್ತು ಇಳಕಲ್ ನಗರಕ್ಕೆ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೂಡಾ ಕೃಷ್ಣೆಗಾಗಿ 50 ಸಾವಿರ ಕೋಟಿ ವ್ಯಯ ಮಾಡುವ ಬದ್ಧತೆ ಪ್ರಕಟಿಸಿದ್ದರು. ಆದರೆ ಅಧಿಕಾರ ಸಿಗುತ್ತಿದ್ದಂತೆ ಯೂಟರ್ನ್ ಹೊಡೆದಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಎಲ್ಲ ನೀರಾವರಿ ಯೋಜನೆಗಳಿಗೆ 50 ಸಾವಿರ ಕೋಟಿ ನೀಡುವುದಾಗಿ ಹೇಳಿದ್ದೆವು, ಕೃಷ್ಣಾ ಯೋಜನೆಯೊಂದಕ್ಕೆ ಹೇಳಿದ್ದಲ್ಲ ಎಂದು ತಮ್ಮ ಹೇಳಿಕೆಯನ್ನೇ ಸಿದ್ದರಾಮಯ್ಯ ತಿರುಚಿದ್ದರು.
ನುಡಿದಂತೆ ನಡೆದಿದ್ದೇವೆ ಎನ್ನುವುದು ಕಾಂಗ್ರೆಸ್ಸಿನ ಟ್ಯಾಗ್‌ಲೈನ್‌ಅಷ್ಟೇ ಬಿಟ್ಟರೆ ಅಲ್ಲಿ ನಿಜಾಂಶ ಇಲ್ಲವೇ ಇಲ್ಲ. ಗ್ಯಾರಂಟಿ ಯೋಜನೆಗಳಲ್ಲೂ ಷರತ್ತುಗಳನ್ನು ಹಾಕಿ ಯೋಜನೆಗಳನ್ನು ಸೀಮಿತಗೊಳಿಸಿ ನುಡಿದಂತೆ ನಡೆದಿದ್ದೇವೆ ಎಂದು ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆ.

ಕಾಂಗ್ರೆಸ್ಸಿನ ಸುಳ್ಳುಗಳ ಪರದೆ ಕುಸಿಯುತ್ತಲೇ ಇದೆ, ಮುಂದೊಂದು ದಿನ ಕಾಂಗ್ರೆಸ್ ಇಂತಹ ಸುಳ್ಳುಗಳಿಂದಲೇ ಸಂಪೂರ್ಣ ನಾಶವಾಗಲಿದೆ ಎಂದು ಬಿಜೆಪಿ ಭವಿಷ್ಯ ನುಡಿದಿದೆ.

 

- Advertisement -  - Advertisement - 
Share This Article
error: Content is protected !!
";