ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಕುರ್ಚಿಯ ಮೇಲೆ ಕುಳಿತು ಲೋಕಾಯಕ್ತದ ಮೇಲೆ ಪ್ರಭಾವ ಬೀರಿ ಕ್ಲೀನ್ ಚಿಟ್ ಪಡೆಯಬಹುದು ಎಂದುಕೊಂಡಿದ್ದ ಭ್ರಷ್ಟ ಸಿಎಂ ಸಿದ್ದರಾಮಯ್ಯ ಅವರಿಗೆ ನಿರಾಸೆ ಕಟ್ಟಿಟ್ಟದ್ದು ಎಂದು ಬಿಜೆಪಿ ಎಚ್ಚರಿಸಿದೆ.
ಆರೋಪಿಯೇ ಮುಖ್ಯಮಂತ್ರಿ ಹುದ್ದೆಯಲ್ಲಿರುವುದರಿಂದ ಲೋಕಾಯುಕ್ತ ಪೊಲೀಸರು ವಸ್ತುನಿಷ್ಠವಾಗಿ ತನಿಖೆ ಮಾಡುವುದು ಅಸಾಧ್ಯ.
ಹೀಗಾಗಿ ಮುಡಾ ಹಗರಣದ ದೂರುದಾರರು ಲೋಕಾಯುಕ್ತ ಬದಲು ಸಿಬಿಐ ತನಿಖೆಗೆ ಕೋರಿದ್ದ ಕೇಸ್‌ನಲ್ಲಿ ಸಿದ್ದರಾಮಯ್ಯನವರಿಗೆ ಸಮನ್ಸ್‌ನೀಡಲು ನ್ಯಾಯಾಲಯವೇ ಸೂಚಿಸಿದೆ. ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕಾದರೆ, ಮೊದಲು ಭ್ರಷ್ಟ ಮುಖ್ಯಮಂತ್ರಿ ರಾಜೀನಾಮೆ ನೀಡಲೇಬೇಕು ಎಂದು ಬಿಜೆಪಿ ಆಗ್ರಹ ಮಾಡಿದೆ.