ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್1 ಆಗಿದೆ ಎಂಬ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರ ಆರೋಪ ನೂರಕ್ಕೆ ನೂರರಷ್ಟು ಸತ್ಯ.! ಎಂದು ಜೆಡಿಎಸ್ ಆರೋಪಿಸಿದೆ.
ಪ್ರಾಧ್ಯಾಪಕ ಹುದ್ದೆಗೆ 50 ಲಕ್ಷ ರೂ. ಲಂಚ ! ಲೂಟಿಕೋರ ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್‌ಇಲ್ಲದೇ ಯಾವುದೇ ಕೆಲಸ ಕಾರ್ಯಗಳು ಆಗುವುದಿಲ್ಲ.
ಸಿದ್ದರಾಮಯ್ಯ ಸರ್ಕಾರ, ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಬೋಧಕರ ಹುದ್ದೆಗಳ ನೇಮಕಾತಿಗೆ ಇಂತಿಷ್ಟು ಲಕ್ಷ ಎಂದು ರೇಟ್‌ಫಿಕ್ಸ್‌ಮಾಡಿ ಲಂಚ ವಸೂಲಿ ಮಾಡುತ್ತಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.
ಭ್ರಷ್ಟ ಕಾಂಗ್ರೆಸ್‌ನ “ಲಂಚದ ಮಾರ್ಕೆಟ್” ಗೂಳಿಯಂತೆ ಮುನ್ನುಗ್ಗುತ್ತಿದ್ದು, ಅಕ್ರಮಗಳ ಮೇಲೆ ಅಕ್ರಮಗಳ ದಾಖಲೆ ಬರೆಯುತ್ತಿದೆ ಎಂದು ಜೆಡಿಎಸ್ ದೂರಿದೆ.