ಗೃಹಲಕ್ಷ್ಮೀ ಹಣದಿಂದ ‘ಕಣ್ಣಿನ ಭಾಗ್ಯ’: ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ ದಂಪತಿ

WhatsApp
Telegram
Facebook
Twitter
LinkedIn

ಚಂದ್ರವಳ್ಳಿ ನ್ಯೂಸ್, ಬೆಳಗಾವಿ :

ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರಿಗೆ ಹೆಚ್ಚು ಅನುಕೂಲಗಳಾಗಿದ್ದು ಇದೀಗ ಮಹಿಳೆಯೊಬ್ಬರು ತನ್ನ ಪತಿಗೆ ಈ ಹಣದಿಂದಲೇ ಕಣ್ಣಿನ ಆಪರೇಷನ್ ಮಾಡಿಸಿದ್ದಾರಂತೆ.

ಹೌದು, ಬೆಳಗಾವಿ ಜಿಲ್ಲೆ ಅನಗೋಳ ಗ್ರಾಮದ ಮಹಿಳೆ ಅನಿತಾ ಬಡಿಗೇರ್ ಎಂಬುವವರು ತನ್ನ ಪತಿ ಚಂದ್ರಶೇಖರ್ ಬಡಿಗೇರ್ ಗೆ ಗೃಹಲಕ್ಷ್ಮಿ ಹಣದಲ್ಲಿ ಕಣ್ಣಿನ ಆಪರೇಷನ್ ಮಾಡಿಸಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿ ಸಂತಸ ಹಂಚಿಕೊಂಡಿರುವ ಈ ದಂಪತಿಗಳು ಸಿಎಂ ಸಿದ್ದರಾಮಯ್ಯ ಮತ್ತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ

ಗೃಹಲಕ್ಷ್ಮಿ ಯೋಜನೆಯಡಿ ತಿಂಗಳಲ್ಲಿ ಖಾತೆಗೆ ಬರುವ 2 ಸಾವಿರ ಹಣದಿಂದ ಮಹಿಳೆಯರು ಟಿವಿ, ಫ್ರಿಡ್ಜ್ ತೆಗೆದುಕೊಂಡ ಬಗ್ಗೆ ವರದಿಯಾಗಿತ್ತು. ಅಲ್ಲದೆ ಇತ್ತೀಚೆಗೆ ಬೆಳಗಾವಿಯಲ್ಲಿ ವೃದ್ದೆಯೊಬ್ಬರು ಗೃಹಲಕ್ಷ್ಮಿ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ್ದು ಗಮನ ಸೆಳೆದಿತ್ತು.

 

 

News Desk   About Us
For Feedback - [email protected]

LATEST Post

error: Content is protected !!
WhatsApp Icon Telegram Icon