ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಒಂದು ತಿಂಗಳ ಮೂರು ದಿನದ ಗಂಡು ಮಗುವನ್ನು ಅಪರಿಚಿತ ದುಷ್ಕರ್ಮಿಗಳು ಮನೆಯ ಓವರ್‌ಹೆಡ್ ನೀರಿನ ಟ್ಯಾಂಕ್‌ಗೆ ಎಸೆದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ಜರುಗಿದೆ.
ಬೆಂಗಳೂರು ಹೊರವಲಯದ ಚಂದಾಪುರ ಸಮೀಪದ ಇಗ್ಗಲೂರಿನಲ್ಲಿ ಈ ದುರ್ಘಟನೆ ನಡೆದಿದ್ದು ಸೂರ್ಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪೋಷಕರ ವಿರೋಧದ ನಡುವೆ ಅನ್ಯಜಾತಿಗೆ ಸೇರಿದ ದಂಪತಿ ಮದುವೆಯಾಗಿದ್ದರು. ಹೀಗಾಗಿ ತಮ್ಮ ಪೋಷಕರಿಗೆ ಗೊತ್ತಿರುವವರ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು ಪೊಲೀಸರು ಎಲ್ಲ ಮೂಲಗಳಿಂದ ತನಿಖೆ ಮಾಡುತ್ತಿದ್ದಾರೆ.