ನಾಲ್ಕೈದು ತಾಸು ಕ್ಯೂನಿಂತರೂ ಸಿಗದ ದೇವರ ದರ್ಶನ ಭಾಗ್ಯ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ(ಬೆಂಗಳೂರು ಗ್ರಾಮಾಂತರ ಜಿಲ್ಲೆ):
ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಾನುವಾರ ಬ್ರಹ್ಮರಥೋತ್ಸವ ಕಾರ್ಯಕ್ರಮ ಇದ್ದ ಹಿನ್ನೆಲೆ ದೇವರ ದರ್ಶನಕ್ಕೆ ಸಾವಿರಾರು ಭಕ್ತರು ಆಗಮಿಸಿ
ಸತತ 5 ಗಂಟೆ ಕಾಲ ಸರದಿ ಸಾಲಿನಲ್ಲಿ ಕ್ಯೂ ನಿಂತರೂ ದೇವರ ದರ್ಶನ ಸಿಗದ ಹಿನ್ನೆಲೆಯಲ್ಲಿ ದೇವಸ್ಥಾನ ಆಡಳಿತ ಮಂಡಳಿ ವಿರುದ್ಧ ಭಕ್ತರು ರೊಚ್ಚಿಗೆದ್ದು ಆಕ್ರೋಶ ವ್ಯಕ್ತಪಡಿಸಿದರು.

 ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸ ಹಿನ್ನೆಲೆಯಲ್ಲಿ ದೂರದ ಊರುಗಳಿಂದ ಭಕ್ತರು ಆಗಮಿಸಿದ್ದರು. ಭಾನುವಾರ ಮುಂಜಾನೆ 3 ಗಂಟೆಯಿಂದಲೇ ದೇವಸ್ಥಾನಕ್ಕೆ ಹರಿದು ಭಕ್ತರು ಕ್ಯೂ ನಿಂತಿದ್ದಾರೆ. ಐದು ಗಂಟೆಗ ಕಾಲ ಕ್ಯೂ ನಲ್ಲಿ ನಿಂತಿದ್ದರೂ ದೇವರ ದರ್ಶನ ಭಕ್ತರಿಗೆ ಸಿಕ್ಕಿಲ್ಲ. ಬೆಳಗ್ಗೆ 6 ಗಂಟೆಯಿಂದ ಕ್ಯೂನಲ್ಲಿ ನಿಂತಿರುವ ಭಕ್ತರು, ಗಂಟೆಗಟ್ಟಲೆ ಕಾದರೂ ದರ್ಶನ ಸಿಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇವಲ ಹಣ ಸಂಗ್ರಹಕ್ಕೆ ಮಾತ್ರ ಆಡಳಿತ ಮಂಡಳಿ ಸೀಮಿತವಾಗಿದೆ, ಭಕ್ತರಿಗೆ ಯಾವುದೇ ವ್ಯವಸ್ಥೆ ಮಾಡಿಲ್ಲ ಎಂದು ಭಕ್ತರು ಆರೋಪಿಸಿದರು.

ನೂರು ರೂಪಾಯಿ ಕೊಟ್ಟು ದರ್ಶನದ ಟಿಕೆಟ್ ಪಡೆದು ಗಂಟೆಗಟ್ಟಲೆ ಕಾದರೂ ದೇವರ ದರ್ಶನ ಸಿಕ್ಕಿಲ್ಲ. ಗಂಟೆಗಟ್ಟಲೆ ಕ್ಯೂನಲ್ಲಿ ನಿಂತವರಿಗೆ ಕುಡಿಯಲು ನೀರಿಲ್ಲ, ಸಕ್ಕರೆ ಕಾಯಿಲೆ ಇರುವ ರೋಗಿಗಳು ಆಹಾರವಿಲ್ಲದೆ ಪರಿತಪಿಸುತ್ತಿದ್ದರು. ಚಿಕ್ಕಮಕ್ಕಳು ಹಸಿವಿನಿಂದ ಅಳುತ್ತಿದ್ದರು. ಪ್ರತಿ ವರ್ಷ ನಾವು ಜಾತ್ರೆಗೆ ಬರುತ್ತಿದ್ದೆವು. ಒಂದು ಗಂಟೆಯಲ್ಲಿ ಲಕ್ಷಾಂತರ ಭಕ್ತರು ದರ್ಶನ ಪಡೆಯುತ್ತಿದ್ದರು. ಈ ವರ್ಷ ಐದು ತಾಸು ಕಳೆದರೂ ದರ್ಶನ ಸಿಕ್ಕಿಲ್ಲ ಎಂದು ಹಲವು ಭಕ್ತರು ಬೇಸರ ವ್ಯಕ್ತಪಡಿಸಿ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

 

- Advertisement -  - Advertisement - 
Share This Article
error: Content is protected !!
";