ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ” ಎನ್ನುವಂತೆ ಈ “ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರದಲ್ಲಿ ಲೂಟಿ ಹೊಡದವನೇ ಜಾಣ” ಎನ್ನುವ ನಿರ್ಧಾರಕ್ಕೆ ಬಂದಂತಿದೆ ವಕ್ಫ್ ಮಂಡಳಿ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಬೇಸರ ವ್ಯಕ್ತ ಪಡಿಸಿದ್ದಾರೆ.
ಔರಂಗಜೇಬ್, ಟಿಪ್ಪು ಸುಲ್ತಾನ್ ಅಪರಾವತಾರದಂತಿರುವ ಈ ಕಾಂಗ್ರೆಸ್ ಸರ್ಕಾರವನ್ನ ಹೀಗೆ ಬಿಟ್ಟರೆ ವಿಶ್ವೇಶ್ವರಯ್ಯನವರು ಓದಿದ ಶಾಲೆಯನ್ನು ವಕ್ಫ್ ಆಸ್ತಿ ಎನ್ನುತ್ತೆ, ವಿಶ್ವೇಶ್ವರಯ್ಯನವರು ಕಟ್ಟಿದ ಕನ್ನಂಬಾಡಿ ಕಟ್ಟೆಯೂ ವಕ್ಫ್ ಆಸ್ತಿ ಆಗುತ್ತದೆ.
ಅಣ್ಣ ಬಸವಣ್ಣನವರ ಅನುಭವ ಮಂಟಪವೂ ವಕ್ಫ್ ಆಸ್ತಿ ಆಗುತ್ತೆ, ಕೆಂಪೇಗೌಡರು ಕಟ್ಟಿದ ಬೆಂಗಳೂರು ವಕ್ಫ್ ಆಸ್ತಿ ಆಗುತ್ತೆ ಎಂದು ಅವರು ವಿಷಾದಿಸಿದರು.
ಸ್ವಾಮಿ ಸಿದ್ದರಾಮಯ್ಯನವರೇ, ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನ ಈ ಕೂಡಲೇ ಸಂಪುಟದಿಂದ ವಜಾ ಮಾಡಿ. ಇಲ್ಲವಾದರೆ ಇಡೀ ಕರ್ನಾಟಕ ವಕ್ಫ್ ಆಸ್ತಿ ಆಗುವ ದಿನ ದೂರವಿಲ್ಲ ಎಂದು ಅಶೋಕ್ ಆತಂಕ ವ್ಯಕ್ತ ಪಡಿಸಿದ್ದಾರೆ.