ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಲಸಂಪನ್ಮೂಲ ಸಚಿವರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಜತೆ ಮಹತ್ವದ ಚರ್ಚೆ ನಡೆಸಲಾಯಿತು.
ಮಹತ್ವದಲ್ಲಿ ಸಭೆಯಲ್ಲಿ ಕಾವೇರಿ ನಿಗಮದ ಉನ್ನಾಧಿಕಾರಿಗಳು, ಜಲಸಂಪನ್ಮೂಲ ಇಲಾಖೆ ಮೇಲಾಧಿಕಾರಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

