ಅರಣ್ಯ ವಲಯದಲ್ಲಿ ನಾಲ್ಕು ಹುಲಿಗಳ ಸಾವು

News Desk

ಚಂದ್ರವಳ್ಳಿ ನ್ಯೂಸ್, ಚಾಮರಾಜನಗರ:
ಚಾಮರಾಜನಗರ ಜಿಲ್ಲೆಯ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಮೀಣ್ಯಂ ವನ್ಯಧಾಮದ ಮೀಸಲು ಅರಣ್ಯ ವಲಯದಲ್ಲಿ ತಾಯಿ ಹುಲಿ ಮತ್ತು ಅದರ 3 ಮರಿಗಳ ಅಸಹಜವಾಗಿ ಸಾವನ್ನಪರುವ ಪ್ರಕರಣ ಬೆಳಕಿಗೆ ಬಂದಿದೆ. ಯಾರೋ ಕಿಡಿಗೇಡಿಗಳು ವಿಷಪ್ರಾಶನ ಮಾಡಿ ಸಾಯಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂದ ಅರಣ್ಯ ಸಚಿವ ಈಶ್ವರ್ ಖಂಡ್ರೆ  ಅವರು ತನಿಖೆಗೆ ಆದೇಶಿಸಿದ್ದಾರೆ.

ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯ ವನ್ಯಧಾಮದಲ್ಲಿ ಅರಣ್ಯ ಸಿಬ್ಬಂದಿ ಬೀಟ್​ ಗೆ ತೆರಳಿದ್ದಾಗ ಹುಲಿಗಳು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.

- Advertisement - 

ಮಾಂಸದಲ್ಲಿ ವಿಷ ಹಾಕಿ ತಾಯಿ ಹುಲಿ ಹಾಗೂ ಅದರ ಮೂರು ಮರಿಗಳನ್ನು ಕೊಂದಿರುವ ಶಂಕೆ ವ್ತಕ್ತವಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಘಟನೆ ಸ್ಥಳಕ್ಕೆ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ತ್ವರಿತ ತನಿಖೆಗೆ ಪ್ರಾರಂಭವಾಗಿದೆ. 

ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಪಿಸಿಸಿಎಫ್ ಅವರ ನೇತೃತ್ವದಲ್ಲಿ ತಕ್ಷಣ ತನಿಖೆ ನಡೆಸುವಂತೆ ಆದೇಶ ಹೊರಡಿಸಿ ವಿದ್ಯುತ್ ಸ್ಪರ್ಶ, ವಿಷ ಪ್ರಾಷನ ಇತ್ಯಾದಿ ಸಾವಿಗೆ ಕಾರಣವಾಗಿದ್ದರೆ ಅದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. 3 ದಿನಗಳ ಒಳಗಾಗಿ ವರದಿ ಸಲ್ಲಿಸುವಂತೆ ಸಚಿವ ಈಶ್ವರ್ ಖಂಡ್ರೆ ಆದೇಶಿಸಿದ್ದಾರೆ.

- Advertisement - 

ಅರಣ್ಯ ಸಚಿವ ಖಂಡ್ರೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, 4 ಹುಲಿಗಳ ಅಸಹಜ ಸಾವಿಗೆ ಕಾರಣವಾದ ವಿಷಯವನ್ನು ಆಳವಾಗಿ ಪರಿಶೀಲಿಸಿ, ತನಿಖೆ ನಡೆಸಬೇಕಾಗಿದೆ. ಅರಣ್ಯ ಸಿಬ್ಬಂದಿಯಿಂದ ನಿರ್ಲಕ್ಷ್ಯ ಆಗಿದ್ದರೆ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಈ ಘಟನೆ ವಿಷಪ್ರಾಶನದ ಫಲಿತಾಂಶವಲ್ಲವೆಂಬುದು ಸಾಬೀತಾದರೆ, ಸಂಬಂಧಪಟ್ಟವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.

Share This Article
error: Content is protected !!
";