ಆಸ್ಪತ್ರೆಯ ಕಾರಿಡಾರ್ ನಲ್ಲೇ ಹೆರಿಗೆ ಮಗು ಸಾವು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹೆರಿಗೆ ನೋವಿನಿಂದ ಒದ್ದಾಡುತ್ತಿದ್ದ ಗರ್ಭಿಣಿ ಮಹಿಳೆಗೆ ಬೆಡ್ ಕೂಡ ಕೊಡದೆ ನೆಲದ ಮೇಲೆ ಕೂರಿಸಿ ಆಕೆ ಶೌಚಾಲಯಕ್ಕೆಂದು ಹೋಗುವಾಗ ಆಸ್ಪತ್ರೆಯ ಕಾರಿಡಾರ್ ನಲ್ಲೇ ಹೆರಿಗೆಯಾಗಿ ಮಗು ಮೃತಪಟ್ಟಿರುವ ದಾರುಣ ಘಟನೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ಮಾಡಿದ್ದಾರೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೇ, ನಿಮ್ಮ ಇಲಾಖೆಯಲ್ಲಿ ಏನಾಗುತ್ತಿದೆ? ನಮ್ಮ ಹಿಂದಿನ ಬಿಜೆಪಿ ಸರ್ಕಾರವಿದ್ದಾಗ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಲ್ಪ್ ಡೆಸ್ಕ್ ಸ್ಥಾಪಿಸಿ ಚಿಕಿತ್ಸೆ ಅರಸಿ ಬರುವ ಬಡ ರೋಗಿಗಳಿಗೆ ಮಾರ್ಗದರ್ಶನ ಮಾಡುವ ವ್ಯವಸ್ಥೆ ಕಲ್ಪಿಸಲು ಯೋಜನೆ ರೂಪಿಸಿದ್ದೆವು.

- Advertisement - 

ಆದರೆ ನಿಮ್ಮ ಕರ್ನಾಟಕ ಕಾಂಗ್ರೆಸ್ ಸರ್ಕಾರ ಬಂದಮೇಲೆ ಆರೋಗ್ಯ ಸೇವೆಗಳ ಶುಲ್ಕ ಹೆಚ್ಚಿಸಿದ್ದು, ಕಳಪೆ ಔಷಧಿ ಕೊಟ್ಟು ಗರ್ಭಿಣಿ, ಬಾಣಂತಿ ಮಹಿಳೆಯರನ್ನು ಕೊಂದಿದ್ದು, ಸರ್ಕಾರಿ ಆಸ್ಪತ್ರಗಳ ಆವರಣದಲ್ಲಿ ಜನಔಷಧಿ ಮಳಿಗೆಗಳನ್ನು ಮುಚ್ಚಿಸಿದ್ದೇ ನಿಮ್ಮ ಸಾಧನೆ ಬಿಟ್ಟರೆ ಜನಸಾಮಾನ್ಯರಿಗೆ, ಬಡಬಗ್ಗರಿಗೆ ಉಪಯೋಗವಾಗುವ ಒಂದು ಕೆಲಸವನ್ನೂ ಮಾಡಲಿಲ್ಲ ಎಂದು ಅವರು ಆರೋಪಿಸಿದ್ದಾರೆ.

ನಿಮ್ಮ ಈ ನಿರ್ಲಕ್ಷ್ಯ, ನಿರಾಸಕ್ತಿಯಲ್ಲೇ ಸರ್ಕಾರದ ಅರ್ಧ ಆಯುಸ್ಸು ಮುಗಿದು ಹೋಯಿತು. ಈಗಲಾದರೂ ಎಚ್ಚೆತ್ತುಕೊಂಡು ಸರ್ಕಾರಿ ಆಸ್ಪತ್ರೆಗಳ ಸುಧಾರಣೆ ಕಡೆಗೆ ಗಮನ ಕೊಡಿ ಎಂದು ಅಶೋಕ್ ತಾಕೀತು ಮಾಡಿದ್ದಾರೆ.

- Advertisement - 

 

Share This Article
error: Content is protected !!
";