ಸೋಲಿನ ಹತಾಶೆ ಕಾಂಗ್ರೆಸ್ ಪಕ್ಷವನ್ನ ಕೀಳು ಮಟ್ಟಕ್ಕೆ ಇಳಿಸಿದೆ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸೋಲಿನ ಹತಾಶೆ ಕಾಂಗ್ರೆಸ್ ಪಕ್ಷವನ್ನ ಯಾವ ಕೀಳು ಮಟ್ಟಕ್ಕೆ ಇಳಿಸಿದೆ ಅಂದರೆ ಮೌತ್ ಕಾ ಸೌದಾಗರ್ ನೀಚ್, ಚಾಯ್ ವಾಲಾ, ರಾವಣ, ಚೌಕಿದಾರ್ ಚೋರ್ ಹೇ, ವಿಷಸರ್ಪ ಎಂದೆಲ್ಲ ಪ್ರಧಾನಿ ಮೋದಿ ಅವರನ್ನು ಟೀಕಿಸಲಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೀಗೆಲ್ಲ ಬಾಯಿಗೆ ಬಂದಂತೆ ಪ್ರಧಾನಿ ಮೋದಿ ಅವರನ್ನ ನಿಂದನೆ ಮಾಡಿದ್ದಾಯ್ತು. ಕಾಂಗ್ರೆಸ್ ಪಕ್ಷದ ನಾಯಕರು ಪ್ರಧಾನಿ ಮೋದಿ ಅವರ ವಿರುದ್ಧ ತಮ್ಮ ನಾಲಿಗೆ ಹರಿಬಿಟ್ಟಾಗಲೆಲ್ಲಾ ದೇಶದ ಜನ ಅವರಿಗೆ ಛೀಮಾರಿ ಹಾಕಿ, ಪಾಠ ಕಲಿಸಿದ್ದೂ ಆಯಿತು.

- Advertisement - 

ಆದರೆ ಇನ್ನೂ ಬುದ್ಧಿ ಕಲಿಯದ ಕಾಂಗ್ರೆಸ್ ಪಕ್ಷ ಮೊನ್ನೆ ಲೋಕಸಭೆಯಲ್ಲಿ ಪ್ರಧಾನಿ ಮೋದಿ ಅವರ ಮೇಲೆ ಹಲ್ಲೆ ಮಾಡಲು ಯೋಜನೆ ರೂಪಿಸಿತ್ತು ಅಂದರೆ ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಮತ್ತೊಂದಿಲ್ಲ ಎಂದು ಅಶೋಕ್ ಟೀಕಾಪ್ರಹಾರ ಮಾಡಿದ್ದಾರೆ.

ಗಾಂಧಿ ಹೆಸರು ಹೇಳಿಕೊಂಡು ರಾಜಕೀಯ ಮಾಡುವ, ಗಾಂಧಿ ಹೆಸರನ್ನು ಕದ್ದು ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ಪಕ್ಷ ಇವತ್ತು ಗಾಂಧೀಜಿ ಅವರ ಅಹಿಂಸಾ ತತ್ವವನ್ನು ಗಾಳಿಗೆ ತೂರಿ, ಹಿಂಸೆಯ ಮಾರ್ಗ ಹಿಡಿದಿರುವುದು ಗಾಂಧೀಜಿ ಅವರಿಗೆ ಮಾಡುತ್ತಿರುವ ಘೋರ ಅವಮಾನ ಕೂಡ.

- Advertisement - 

ಭಾರತದ ಪ್ರಜ್ಞಾವಂತ ನಾಗರಿಕರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಇದೆಲ್ಲದಕ್ಕೂ ಕಾಂಗ್ರೆಸ್ ಪಕ್ಷ ಮುಂದಿನ ದಿನಗಳಲ್ಲಿ ಬೆಲೆ ತೆತ್ತಲೇಬೇಕು ಎಂದು ಅಶೋಕ್ ಎಚ್ಚರಿಸಿದ್ದಾರೆ.

Share This Article
error: Content is protected !!
";