ಸಂವಿಧಾನ ದಿನಾಚರಣೆ ಯಶಸ್ವಿಗೊಳಿಸಿ-ಜಿಲ್ಲಾಧಿಕಾರಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಂವಿಧಾನ ದಿನಾಚರಣೆ ಕಾರ್ಯಕ್ರಮ ಇದೇ ನ.26 ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ಪ್ರವಾಸಿ ಮಂದಿರದ ಬಳಿ ಇರುವ ಲಿಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.

      ಸಂವಿಧಾನ ದಿನಾಚರಣೆ ಅಂಗವಾಗಿ ನಗರದ ವಿವಿಧ ಬೀದಿಗಳಲ್ಲಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅಂದು ಬೆಳಿಗ್ಗೆ 8ಕ್ಕೆ ಕೋಟೆ ಮುಂಭಾಗದಿಂದ ಪ್ರಾರಂಭಿಸಿ, ಕಾಮನಬಾವಿ ಬಡಾವಣೆ, ಕರುವಿನಕಟ್ಟೆ ಸರ್ಕಲ್, ಜೋಗಿಮಟ್ಟಿ ರಸ್ತೆ ಬಲಭಾಗಕ್ಕೆ, ಜೋಗಿಮಟ್ಟಿ ರಸ್ತೆ 5ನೇ ಕ್ರಾಸ್ ಎಡತಿರುವು, ಬುದ್ಧ ಪ್ರತಿಮೆ, ಸ್ಟೇಡಿಯಂ, ಸ್ಟೇಡಿಯಂ ರಸ್ತೆಯಿಂದ ಹಳೇ ವೈಶಾಲಿ ವೃತ್ತ, ಮದಕರಿ ನಾಯಕ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮುಕ್ತಾಯಗೊಳ್ಳುವುದು.

- Advertisement - 

      ಸಂವಿಧಾನದ ಪೀಠಿಕೆಯನ್ನು ಬೆಳ್ಳಿ ರಥದಲ್ಲಿ ವಿವಿಧ ಬೀದಿಗಳ ಮೂಲಕ ಜಾಥಾದ ಮುಖೇನ ಕರೆತರಲಾಗುವುದು. ಕಾರ್ಯಕ್ರಮದ ಸ್ಥಳದಲ್ಲಿ ವಿದ್ಯಾರ್ಥಿಗಳು, ಸಂವಿಧಾನದ ಕುರಿತು ಬಿಡಿಸಲಾದ ಚಿತ್ರಗಳನ್ನು ಪ್ರದರ್ಶಿಸಲಾಗುವುದು. ಚಿತ್ರಕಲೆ, ಭಾಷಣ ಸ್ಪರ್ಧೆಗಳಿಗೆ ಸಂಬಂಧಿಸಿದಂತೆ ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳನ್ನು ಪ್ರಮಾಣ ಪತ್ರ, ಶಾಲು, ಹಾರ, ಸ್ಮರಣಿಕೆ ವಿತರಿಸಲಾಗುವುದು. ಸಂವಿಧಾನದ ಕುರಿತು ನುರಿತ ಪ್ರಾಧ್ಯಾಪಕರಿಂದ ಉಪನ್ಯಾಸ ನೀಡಲಾಗುವುದು.

     ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ಜಿಲ್ಲೆಯ ಸಮಸ್ತ ಗೌರವಾನ್ವಿತ ಜನಪ್ರತಿನಿಧಿಗಳು, ಪರಿಶಿಷ್ಟ ಜಾತಿ, ಪ.ಪಂಗಡ, ಇತರೆ ಹಿಂದುಳಿದ ವರ್ಗಗಳ ಸಮುದಾಯದವರು ಸೇರಿದಂತೆ ಸಮಸ್ತ ವರ್ಗದ ಮುಖಂಡರು, ಗಣ್ಯರು, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

- Advertisement - 

 

 

 

Share This Article
error: Content is protected !!
";