ಕಾಂಗ್ರೆಸ್ ಏಜೆಂಟ್ ರೀತಿ ವರ್ತಿಸುತ್ತಿರುವ ಜಿಲ್ಲಾಧಿಕಾರಿ
ಚಂದ್ರವಳ್ಳಿ ನ್ಯೂಸ್, ಹಾಸನ:
ಹಾಸನ ಜಿಲ್ಲಾಡಳಿತದ ವರ್ತನೆಯಿಂದಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಅವಮಾನವಾಗಿದೆ ಎಂದು ಆರೋಪಿಸಿ ಜೆಡಿಎಸ್ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ.
ಜಿಲ್ಲಾಧಿಕಾರಿಗಳು ಕೂಡಲೇ ಪ್ರತಿಭಟನಾ ಸ್ಥಳಕ್ಕೆ ಬರಬೇಕು ಮತ್ತು ಬಹಿರಂಗ ಕ್ಷಮೆ ಕೇಳಬೇಕು ಎಂದು ಪ್ರತಿಭಟನಾ ನಿರತರು ಒತ್ತಾಯಿಸಿದ್ದಾರೆ.
ಹಾಸನಾಂಬೆ ದರ್ಶನಕ್ಕೆ ಬಂದ ಕುಮಾರಸ್ವಾಮಿ ಅವರಿಗೆ ಕನಿಷ್ಠ ಗೌರವ ತೋರಿಲ್ಲ. ಕಾಂಗ್ರೆಸ್ ಏಜೆಂಟ್ ರೀತಿಯಲ್ಲಿ ಡಿಸಿ ವರ್ತಿಸುತ್ತಿದ್ದು, ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ಚುನಾವಣೆಯಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ವೇದಿಕೆ ಮೇಲೆ ಸ್ಥಾನ ನೀಡಲಾಗಿದೆ. ಆದರೆ ಶಾಸಕನಾಗಿರುವ ನನ್ನ ವೇದಿಕೆಗೆ ಕರೆದಿಲ್ಲ ಎಂದು ಶಾಸಕ ಸ್ವರೂಪ್ ಪ್ರಕಾಶ್ ಆರೋಪಿಸಿದ್ದಾರೆ.

