ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಸರ್ಕಾರದ ರಾಜಕೀಯ ತೆವಲಿಗೆ ಇಡೀ ರಾಜ್ಯದ ಆಡಳಿತ ಯಂತ್ರ ಸಂಪೂರ್ಣ ಸ್ತಬ್ಧ!ವಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಜಾತಿಗಣತಿ ಸಮೀಕ್ಷಾ ಕಾರ್ಯಕ್ಕೆ ಸಿಬ್ಬಂದಿ ನಿಯೋಜನೆ ಮಾಡಿರುವ ಹಿನ್ನೆಲೆಯಲ್ಲಿ ಜನಸಾಮಾನ್ಯರು ತಮ್ಮ ದಿನನಿತ್ಯದ ಕೆಲಸಗಳಿಗಾಗಿ ಪಡದಾಡುವ ಎದುರಾಗಿದೆ.
ಶಾಲೆಗಳಲ್ಲಿ ಶಿಕ್ಷಕರಿಲ್ಲ, BESCOM, BWSSB ಕಚೇರಿಗಳಲ್ಲಿ ಸಿಬ್ಬಂದಿ ಇಲ್ಲ. RTO ಕಚೇರಿಗಳಲ್ಲಿ ಸಿಬ್ಬಂದಿ ಇಲ್ಲ ಸಿಎಂ ಸಿದ್ದರಾಮಯ್ಯ ನವರೇ, ತಮ್ಮ ಕುರ್ಚಿ ಉಳಿಸಿಕೊಳ್ಳುವ ನಾಟಕಕ್ಕೆ ಕನ್ನಡಿಗರು ಶಿಕ್ಷೆ ಅನುಭವಿಸುತ್ತಿದ್ದಾರೆ.
ಡಿನ್ನರ್ ಮೀಟಿಂಗ್ ಮಾಡುವ ಬದಲು ಒಮ್ಮೆ ಬೀದಿಗಿಳಿದು ಜನರ ಅಭಿಪ್ರಾಯ ಕೇಳಿ. ಜನ ತಮ್ಮ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಅಶೋಕ್ ಎಚ್ಚರಿಸಿದ್ದಾರೆ.

