ಬಾಲಕನ ಮರ್ಮಾಂಗಕ್ಕೆ ಕೆಂಪು ಇರುವೆ ಬಿಟ್ಟು ಚಿತ್ರ ಹಿಂಸೆ ನೀಡಿದ ದುಷ್ಟರು

News Desk

ಚಂದ್ರವಳ್ಳಿ ನ್ಯೂಸ್, ದಾವಣಗೆರೆ :
ಬಾಲಕನಿಗೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆ ಬೆಣ್ಣೆ ನಗರಿಯಲ್ಲಿ ನಡೆದಿದ್ದು
, ಇದೀಗ ಬಾಲಕನಿಗೆ ಚಿತ್ರ ಹಿಂಸೆ ನೀಡುವ ವಿಡಿಯೋ ವೈರಲ್ ಆಗಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಬಳಿಯ ಅಸ್ತಾಪನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಬಾಲಕನನ್ನು ಅಡಕೆ ಮರಕ್ಕೆ ಕಟ್ಟಿ ಹಲ್ಲೆ ಮಾಡಲಾಗಿದೆ‌. ಜೊತೆಗೆ ಮರ್ಮಾಂಗಕ್ಕೆ ಕೆಂಪು ಇರುವೆ ಬಿಟ್ಟು ಹಿಂಸೆ ನೀಡಿದ್ದು ನೋವು ತಾಳಲಾರದೇ ಚೀರಾಡುತ್ತಿರುವ ಬಾಲಕ ಸಾಕಷ್ಟು ಹಿಂಸೆ ಪಟ್ಟಿದ್ದಾನೆ.

ಹಕ್ಕಿ- ಪಿಕ್ಕಿ ಜನಾಂಗದ ಬಾಲಕನ ಮೇಲೆ ಅದೇ ಜನಾಂಗದ ಯುವಕರು ಹಲ್ಲೆ ಮಾಡಿದ್ದಾರೆ. ಇವರು ಗಿಡ ಮೂಲಿಕೆ ಮಾರಾಟ ಮಾಡಿ ಜೀವನ ನಡೆಸುತ್ತಿದ್ದರು. ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಬಾಲಕನ ಮೇಲೆ ಹಲ್ಲೆ ನಡೆಸಲಾಗಿದೆ.

 10 ರಿಂದ 15 ಜನ ಯುವಕರ ಗುಂಪಿನಿಂದ ಹಲ್ಲೆ ಮಾಡಲಾಗಿದೆ. ಕೋಲು ದೊಣ್ಣೆ, ಡ್ರಿಪ್ ಪೈಪ್ ನಿಂದ ಹಲ್ಲೆ ಮಾಡಿ ಚಿತ್ರ ಹಿಂಸೆ ನೀಡಿ ವಿಕೃತಿ ಮೆರೆದ ಯುವಕರ ಗುಂಪೊಂದು ವಿಕೃತಿ ಮೆರೆದಿದ್ದಾರೆ. ‌ಇದೇ ಕೆಲ ತಿಂಗಳ ಹಿಂದೆ ನಡೆದ ಘಟನೆ ನಡೆದಿದ್ದು, ವೀಡಿಯೋ ವೈರಲ್ ಆಗಿದ್ದೇ ತಡ ಕೃತ್ಯವೆಸಗಿರವರ ವಿರುದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೃತ್ಯ ಎಸಗಿದವರ ಪತ್ತೆ ಹಚ್ಚಿ ಬಂಧಿಸುವಂತೆ ಸಾರ್ವಜನಿಕರ ಒತ್ತಾಯಿಸಿದ್ದಾರೆ.

 

Share This Article
error: Content is protected !!
";