ಚಂದ್ರವಳ್ಳಿ ನ್ಯೂಸ್, ಕಲಬುರಗಿ:
ಮುಂಬೈ ಪೊಲೀಸರಿಂದ ಮಾದಕ ದ್ರವ್ಯ ಸಾಗಾಟ ಆರೋಪದಲ್ಲಿ ಬಂಧಿತನಾಗಿರುವ ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿ ಅವರನ್ನು ಉಚ್ಛಾಟನೆ ಮಾಡಲಾಗಿದೆ.
ಮಾದಕ ದ್ರವ್ಯ ಸಾಗಣೆ ಪ್ರಕರಣದಲ್ಲಿ ಪೊಲೀಸರಿಂದ ಬಂಧನವಾಗಿರುವ ಲಿಂಗರಾಜ್ ಕಣ್ಣಿಯನ್ನು ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನದಿಂದ ಉಚ್ಚಾಟನೆ ಮಾಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಅವರು ಆದೇಶ ಹೊರಡಿಸಿದ್ದಾರೆ.
ನಿಷೇಧಿತ 120ಕ್ಕೂ ಹೆಚ್ಚು ಎನ್ರೆಕ್ಸ್ ಬಾಟಲ್ಗಳನ್ನು ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ತೌಸಿಫ್ ಆಸಿಫ್ ತುರವೇ (A1) ಕಲಬುರಗಿಯ ಲಿಂಗರಾಜ ಕಣ್ಣಿ (A2) ಹಾಗೂ ಸಯ್ಯದ್ ಇರ್ಫಾನ್ (A3) ಬಂಧಿತರಾಗಿದ್ದು, ಮಹಾರಾಷ್ಟ್ರದ ಥಾಣೆಯಲ್ಲಿ ಮೂವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದಾಗಿ ಮುಂಬೈನ ಬಜಾರ್ಪೇಠ್ ಪೊಲೀಸ್ ಮೂಲಗಳು ತಿಳಿಸಿವೆ.