ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ರೈತ ದ್ರೋಹಿ ಬಿಜೆಪಿಯಿಂದ ಅನ್ನದಾತರ ಬದುಕು ಮೂರಾಬಟ್ಟೆ ಆಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಕನಿಷ್ಠ ಬೆಂಬಲ ಬೆಲೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ
ಎರಡನೇ ಬಾರಿ ರೈತರು ದೆಹಲಿ ಚಲೋ ಪ್ರತಿಭಟನೆ ಆರಂಭಿಸಿದ್ದು, ಅವರನ್ನು ತಡೆಯುವ ಪ್ರಯತ್ನದಲ್ಲಿ ರೈತದ್ರೋಹಿ ಕೇಂದ್ರ ಬಿಜೆಪಿ ಸರ್ಕಾರ ಪೊಲೀಸರ ಮೂಲಕ ರೈತರ ಮೇಲೆ ಹಲ್ಲೆ ನಡೆಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಅನ್ನದಾತರ ಪ್ರತಿಭಟನೆಯನ್ನು ಹತ್ತಿಕ್ಕಲು ಮೋದಿ ಸರ್ಕಾರ ಇಂತಹ ಕ್ರೂರ ಮಟ್ಟಕ್ಕೆ ತಲುಪಿರುವುದು ದೇಶದ ದುರಂತ ಎಂದು ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ.