ರೈತರ ಆತ್ಮಹತ್ಯೆ ಪ್ರಮಾಣ ಕಡಿಮೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯಪಾಲರು ಅಧಿವೇಶನದಲ್ಲಿ ಮಾತನಾಡಿ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ತೀವ್ರರೂಪದ ಅತಿವೃಷ್ಟಿ ಅನಾವೃಷ್ಟಿಗಳಿಲ್ಲದ ಕಾರಣ ರೈತರ ಕೈಗೆ ಉತ್ತಮ ಫಸಲು ಸಿಕ್ಕಿದೆ. ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಂದ ಸುಮಾರು 149 ಲಕ್ಷ ಟನ್ನುಗಳಷ್ಟು ಕೃಷಿ ಉತ್ಪಾದನೆ ನಿರೀಕ್ಷಿಸಲಾಗಿದೆ.

ಸರ್ಕಾರವು ತೆಗೆದುಕೊಂಡ ಕಲ್ಯಾಣ ಕಾರ್ಯಕ್ರಮಗಳಿಂದ ರಾಜ್ಯದ ರೈತ ಕುಟುಂಬಗಳಲ್ಲಿ ಆತ್ಮಹತ್ಯೆಗಳ ಪ್ರಮಾಣವು ಗಣನೀಯವಾಗಿ ಕಡಿಮೆಯಾಗಿದೆ. ನನ್ನ ಸರ್ಕಾರವು ರಚನೆಯಾದಾಗಿಂದಲೂ ತೊಗರಿ ಮತ್ತು ಕೊಬ್ಬರಿಗೆ ಬೆಲೆಗಳು ಕುಸಿದಾಗ ರೈತರ ನೆರವಿಗೆ ನಿಂತು ಪೆÇ್ರೀತ್ಸಾಹ ಧನವನ್ನು ನೀಡಿದೆ.

ಕೃಷಿ ಭಾಗ್ಯ ಯೋಜನೆಯನ್ನು ಮುಂದುವರೆಸುವ ಮೂಲಕ ಅಗತ್ಯ ಇರುವ ಕಡೆಗಳಲ್ಲೆಲ್ಲಾ ಕೃಷಿ ಹೊಂಡಗಳನ್ನು ನಿರ್ಮಿಸಲಾಗುತ್ತಿದೆ ಎಂದು ಥಾವರ್‍ ಚಂದ್ ಗೆಹ್ಲೋಟ್ ತಿಳಿಸಿದರು.

Share This Article
error: Content is protected !!
";