ಜಾತಿಗಣತಿ ವರದಿಯಲ್ಲಿರುವ ಅಂಕಿ-ಅಂಶಗಳು ಬರೀ ಊಹಾಪೋಹ- ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಾತಿಗಣತಿ ವರದಿಯಲ್ಲಿರುವ ಅಂಕಿ-ಅಂಶ ಇನ್ನೂ ಸಾರ್ವಜನಿಕವಾಗದೇ ಇದ್ದು, ಈಗ ಕೇಳಿಬರುತ್ತಿರುವ ವಿಚಾರಗಳು ಬರೀ ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನಾವಶ್ಯಕ. ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ದೆಹಲಿಯಲ್ಲಿ ಮಾಧ್ಯಮಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿ, ಆಯೋಧ್ಯೆಯ ರಾಮಮಂದಿರ ಪ್ರಾರಂಭವಾದ ದಿನ ದೇಶಕ್ಕೆ ನಿಜ ಅರ್ಥದಲ್ಲಿ ಸ್ವಾತಂತ್ರ್ಯ ಲಭಿಸಿದೆ ಎಂಬ ಆರ್ ಎಸ್ ಎಸ್ ಪ್ರಮುಖ ಮೋಹನ್ ಭಾಗವತ್ ಅವರ ಹೇಳಿಕೆ ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನಗೈದ ಹೋರಾಟಗಾರರಿಗೆ ಮಾಡಿದ ಅವಮಾನ. ಈ ಬಗ್ಗೆ ರಾಹುಲ್ ಗಾಂಧಿಯವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದರು. ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸದ ಆರ್‌ಎಸ್‌ಎಸ್ ಹಾಗೂ ಬಿಜೆಪಿಯವರು ಬ್ರಿಟೀಷರೊಂದಿಗೆ ಶಾಮೀಲಾಗಿದ್ದರು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಿಯೋನಿಕ್ಸ್ ಅಸೋಸಿಯೇಷನ್ ‍ಅವರು ಬಾಕಿ ಇರುವ ಬಿಲ್ಲುಗಳು ಪಾವತಿಯಾಗದಿರುವ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರದವರು ದೊಡ್ಡ ಮೊತ್ತದ ಬಿಲ್ಲುಗಳನ್ನು ಪಾವತಿ ಮಾಡದೇ ಬಾಕಿ ಉಳಿಸಿದ್ದಾರೆ. ಈ ಬಿಲ್ಲುಗಳನ್ನು ಹಂತ ಹಂತವಾಗಿ ಪಾವತಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಭರವಸೆ ನೀಡಿದ್ದಾರೆ.

 

- Advertisement -  - Advertisement -  - Advertisement - 
Share This Article
error: Content is protected !!
";