ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಈ ಬಾರಿಯ ಮೈಸೂರು ದಸರಾ ಸ್ತಬ್ಧ ಚಿತ್ರ ಪ್ರದರ್ಶನದಲ್ಲಿ ಚಿತ್ರದುರ್ಗ ಜಿಲ್ಲಾಡಳಿತ ವ್ಯವಸ್ಥೆ ಮಾಡಿದ್ದ ಸ್ತಬ್ಧ ಚಿತ್ರಕ್ಕೆ ಪ್ರಥಮ ಬಹುಮಾನ ಲಭಿಸಿದೆ.
ಮೈಸೂರು ದಸರಾ ಸ್ತಬ್ಧ ಚಿತ್ರ ಪ್ರದರ್ಶನದಲ್ಲಿ ಬೆಂಗಳೂರು ವಿಭಾಗದಲ್ಲಿ ಚಿತ್ರದುರ್ಗ ಜಿಲ್ಲೆಯ ಸ್ತಬ್ಧ ಚಿತ್ರ ಪ್ರಥಮ ಬಹುಮಾನ ಕ್ಕೆ ಭಾಜನ ವಾಗಿರುತ್ತದೆ ಎಂದು ತಿಳಿಸಲು ಹರ್ಷಿಸುತ್ತೇನೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಒಂದು ಸ್ತಬ್ಧ ಚಿತ್ರ ಪರಿಕಲ್ಪನೆಗೆ ಮಾರ್ಗದರ್ಶನ ನೀಡಿದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಗೌರವಪೂರ್ವಕ ಧನ್ಯವಾದಗಳು.
ಸ್ತಬ್ಧ ಚಿತ್ರ ತಯಾರಿಕೆ ಹಾಗೂ ಪ್ರದರ್ಶನದಲ್ಲಿ ಶ್ರಮವಹಿಸಿದ ಎಲ್ಲಾ ಕಲಾವಿದರಿಗೂ ಹಾಗೂ ಸಹಕರಿಸಿದ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೂ ಹಾಗೂ ನೋಡಲ್ ಅಧಿಕಾರಿ ಇವರಿಗೂ ಸಹ ಧನ್ಯವಾದಗಳು.

ಚಿತ್ರದುರ್ಗ ಜಿಲ್ಲಾ ತಂಡಕ್ಕೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಅಭಿನಂದನೆ ಗಳು ಎಂದು ಅವರು ತಿಳಿಸಿದರು.

