ಚಂದ್ರವಳ್ಳಿ ನ್ಯೂಸ್, ಆನೇಕಲ್, ಬೆಂ. ಗ್ರಾಮಾಂತರ:
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಹಳೇ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಸೂಟ್ಕೇಸ್ನಲ್ಲಿ ಅಪರಿಚಿತ ಬಾಲಕಿಯ ಶವ ಪತ್ತೆಯಾಗಿದ್ದು ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ.
ಹೊಸೂರು ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ರೈಲ್ವೆ ಬ್ರಿಡ್ಜ್ ಬಳಿ ಸುಮಾರು 10 ವರ್ಷದ ಬಾಲಕಿಯ ಮೃತದೇಹ ಸೂಟ್ ಕೇಸ್ ನಲ್ಲಿ ಪತ್ತೆಯಾಗಿದೆ.
ಸ್ಥಳಕ್ಕೆ ಸೂರ್ಯನಗರ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಬಾಲಕಿ ಮೃತಪಟ್ಟ ಬಳಿಕ ಇಲ್ಲಿಗೆ ತಂದು ಎಸೆದು ಹೋಗಿರುವ ಶಂಕೆಯನ್ನು ಪೊಲೀಸರು ವ್ಯಕ್ತ ಪಡಿಸಿದ್ದಾರೆ. ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.