ದಿ ಗೋಲ್ಡನ್ ಚಾರಿಯೇಟ್ ರೈಲು ಪುನಾರಂಭ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದಕ್ಷಿಣ ಭಾರತದ ಏಕೈಕ ಐಷರಾಮಿ ರೈಲು ದಿ ಗೋಲ್ಡನ್ ಚಾರಿಯೇಟ್ನ್ನು .ಆರ್.ಸಿ.ಟಿ.ಸಿ ರವರು ನಿರ್ವಹಣೆ ಮಾಡುತ್ತಿದ್ದು ಪ್ರಸ್ತುತ 2024-25ನೇ ಸಾಲಿನಲ್ಲಿ ರಾಜ್ಯದಲ್ಲಿ ಪ್ರವಾಸ ಕಾರ್ಯಕ್ರಮಗಳು ಹೆಚ್ಚಿರುವುದರಿಂದ ಕರ್ನಾಟಕ ರಾಜ್ಯದ ಪ್ರವಾಸಿ ತಾಣಗಳು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರವಾಸಿಗರನ್ನು ಆಕರ್ಷಿಸುವುದು ಸೂಕ್ತವಾಗಿರುವ ಹಿನ್ನೆಲೆಯಲ್ಲಿ ದಿ ಗೋಲ್ಡನ್ ಚಾರಿಯೇಟ್ರೈಲನ್ನು ಪುನಾರಂಭಿಸಲಾಗಿದೆ.

ಇದೇ 2024 ಡಿಸೆಂಬರ್ 21 ರಿಂದ ಬೆಂಗಳೂರಿನಿಂದ ಹೊರಟು, ಮೈಸೂರುಕಾಂಚಿಪುರಂಮಹಾಬಲಿಪುರಂತಂಜಾವುರ್ಚೆಟ್ಟಿನಾಡುಕೊಚ್ಚಿನ್ಚೆರ್ತಲ / ಮರೈಕುಲಮ್, ಬೆಂಗಳೂರು ಮಾರ್ಗವಾಗಿ ಸಂಚಾರ ಪ್ರಾರಂಭಿಸಲಿದೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕೇಂದ್ರ ರಾಜ್ಯ ರೈಲ್ವೇ ಸಚಿವ ವಿ.ಸೋಮಣ್ಣ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ.ಪಾಟೀಲ ರವರ ಸಮ್ಮುಖದಲ್ಲಿ ಯಶವಂತಪುರ (ಜಂಕ್ಷನ್) ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ 06 ರಲ್ಲಿ ಡಿಸೆಂಬರ್ 21 ರಂದು ಬೆಳಿಗ್ಗೆ 09.30 ಕ್ಕೆ ದಿ ಗೋಲ್ಡನ್ ಚಾರಿಯೇಟ್ರೈಲಿಗೆ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

 

- Advertisement -  - Advertisement - 
Share This Article
error: Content is protected !!
";