ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಕರ್ನಾಟಕ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಭ್ರಷ್ಟಾಚಾರವನ್ನು, ಖುದ್ದು ಕಾಂಗ್ರೆಸ್ ಶಾಸಕ, ಮುಖ್ಯಮಂತ್ರಿಗಳ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಅವರು ಮತ್ತೊಮ್ಮೆ ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ತಿಳಿಸಿದೆ.
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿಯವರೆಗೂ ಭ್ರಷ್ಟಾಚಾರ ಹಾಗೂ ಬೆಲೆ ಏರಿಕೆಯನ್ನು ಹೊರತುಪಡಿಸಿ ಇನ್ನೇನನ್ನೂ ಮಾಡಿಲ್ಲ.
ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್‌ಸುಳ್ಳು ಆರೋಪ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ 60% ಕಮಿಷನ್ ಮೂಲಕ ಸರ್ಕಾರ ನಡೆಸುತ್ತಿದೆ. ಎಲ್ಲಾ ಇಲಾಖೆಗಳಲ್ಲೂ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸುತ್ತಿದೆ.
ಕಲೆಕ್ಷನ್-ಕಮಿಷನ್‌ನಲ್ಲಿ ನಿರತವಾಗಿರುವ ಕೈ ಸರ್ಕಾರ ರಾಜ್ಯದ ಜನರ ಪಾಲಿಗೆ ಮರಣಶಾಸನವಾಗಿದೆ ಎಂದು ಬಿಜೆಪಿ ಹರಿಹಾಯ್ದಿದೆ.