ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉತ್ತರ ಕನ್ನಡ ಜಿಲ್ಲೆಯಲ್ಲಿ ಹೂಡಿಕೆ ಮಾಡಲು ಸಿದ್ಧವಿರುವ 30ಕ್ಕೂ ಹೆಚ್ಚು ಕಂಪನಿಗಳಿಗೆ ಭೂಮಿ ಒದಗಿಸಲು ನಿರ್ಲಕ್ಷ್ಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಧೋರಣೆಯಿಂದ ಹೂಡಿಕೆದಾರರು ರಾಜ್ಯದಿಂದ ವಿಮುಖರಾಗುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯ ಯುವಕರು ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆತಂಕ ವ್ಯಕ್ತ ಪಡಿಸಿದ್ದಾರೆ.
ಹೂಡಿಕೆದಾರರ ಸಮಾವೇಶದಲ್ಲಿ ಸೂಟು ಬೂಟು ಹಾಕಿಕೊಂಡು 10 ಲಕ್ಷ ಕೋಟಿ ಬಂಡವಾಳ ಬರಲಿದೆ ಎಂದು ಬೊಗಳೆ ಜಾಹೀರಾತು ಕೊಟ್ಟುಬಿಟ್ಟರೆ ನಿಮಗೆ ಪುಕ್ಕಟೆ ಪ್ರಚಾರ ಸಿಗುವುದೇ ಹೊರತು ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿ ಆಗುವುದಿಲ್ಲ ಸಚಿವ ಸಚಿವ ಎಂ.ಬಿ ಪಾಟೀಲ್ ಅವರೇ.
ಹೂಡಿಕೆದಾರರಿಗೆ ಅಗತ್ಯವಿರುವ ಭೂಮಿ, ಮೂಲಸೌಕರ್ಯ ಒದಗಿಸದರೆ ಮಾತ್ರ ರಾಜ್ಯಕ್ಕೆ ಹೊಸ ಕೈಗಾರಿಕೆಗಳು ಬರುತ್ತವೆ, ನಮ್ಮ ಯುವಕ ಯುವತಿಯರಿಗೆ ಉದ್ಯೋಗ ಸಿಗುತ್ತವೆ.
ಕ್ವಿನ್ ಸಿಟಿ, ಹೂಡಿಕೆದಾರರ ಸಮಾವೇಶ ಎಂದು ಬರೀ ತೋರಿಕೆ ಮಾಡುವುದು ಬಿಟ್ಟು, ಕೈಗಾರಿಕೆಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಬೇಕಾದ ಸೌಕರ್ಯ, ಅನುಕೂಲ ಒದಗಿಸುವ ಕಡೆ ಗಮನ ಕೊಡಿ ಎಂದು ಅಶೋಕ್ ತಾಕೀತು ಮಾಡಿದ್ದಾರೆ.