ಸಿದ್ದಾರ್ಥ ವಿಹಾರ ಟ್ರಸ್ಟ್​​ಗೆ ಸಿಎ ನಿವೇಶನ: ವಿವರಣೆ ಕೇಳಿದ ರಾಜ್ಯಪಾಲ  

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು :

ಸಹೋದರ ರಾಹುಲ್ ಖರ್ಗೆಯವರ ಸಿದ್ದಾರ್ಥ ವಿಹಾರ ಟ್ರಸ್ಟ್‌ಗೆ ತಮ್ಮ ಪ್ರಭಾವ ಬಳಸಿ ಸಚಿವ ಪ್ರಿಯಾಂಕ್ ಖರ್ಗೆಯವರು ಕೆಐಎಡಿಬಿಯಿಂದ ಸಿಎ ನಿವೇಶನ ಮಂಜೂರು ಮಾಡಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್‌ಚಂದ್‌ಗೆಹ್ಲೋಟ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬಸ್ಥರು ಟ್ರಸ್ಟಿಗಳಾಗಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್​​ಗೆ ನಿಯಮ ಉಲ್ಲಂಘನೆಯ ಜೊತೆಗೆ ತರಾತುರಿಯಲ್ಲಿ ಕೆಐಎಡಿಬಿಯಿಂದ ಐದು ಎಕರೆ ಸಿಎ ನಿವೇಶನ ಮಂಜೂರು ಮಾಡಲಾಗಿದೆ. ಸಚಿವ ಪ್ರಿಯಾಂಕ್​ ಖರ್ಗೆ ತಮ್ಮ ಪ್ರಭಾವ ಬಳಸಿ ನಿವೇಶನ ಮಂಜೂರು ಮಾಡಿಸಿದ್ದಾರೆಎಂದು ಆರೋಪಿಸಿ ವಿಧಾನಪರಿಷತ್​ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯಪಾಲರಿಗೆ ದೂರು ನೀಡಿದ್ದರು.

ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಯಿಂದ ವಿವರಣೆ ಕೇಳಿರುವ ಕುರಿತು ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, “ರಾಜ್ಯಪಾಲರಿಗೆ ಎರಡು ಸಂವಿಧಾನ ಇದೆ. ಬಿಜೆಪಿ, ಜೆಡಿಎಸ್​ದು ಒಂದು ಸಂವಿಧಾನ, ಕಾಂಗ್ರೆಸ್​​ಗೊಂದು ಸಂವಿಧಾನಎಂದು ವಾಗ್ದಾಳಿ ನಡೆಸಿದ್ದಾರೆ.

ನಮ್ಮ ವಿಚಾರದಲ್ಲಿ ಬಿಜೆಪಿ ಮೊದಲು 10 ಆರೋಪ ಮಾಡುತ್ತಿತ್ತು. ಎರಡನೇ ದಿನ ಐದು ಆರೋಪಗಳನ್ನು ಮಾಡಿದ್ದರು, ಈಗ ಸುಮ್ಮನಿದ್ದಾರೆ. ಛಲವಾದಿ ನಾರಾಯಣಸ್ವಾಮಿ ಬಿಟ್ಟು ಬೇರೆ ಯಾರೂ ಏಕೆ ಮಾತನಾಡುತ್ತಿಲ್ಲ?” ಎಂದು ಪ್ರಶ್ನಿಸಿದ್ದಾರೆ.

 

 

- Advertisement -  - Advertisement -  - Advertisement - 
Share This Article
error: Content is protected !!
";