ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಸರ್ಕಾರದ ಪ್ರಸ್ತಾವಿತ ಗ್ರೇಟರ್ ಬೆಂಗಳೂರು ಮಸೂದೆಯು “ಅಸಂವಿಧಾನಿಕ”ವಾಗಿದ್ದು, ನಗರ ಆಡಳಿತದ ಪ್ರಜಾಪ್ರಭುತ್ವ ರಚನೆಯನ್ನು ರಕ್ಷಿಸಲು, ಪ್ರಸ್ತಾವಿತ ಮಸೂದೆಗೆ ಅಂಕಿತ ಹಾಕಬಾರದೆಂದು ಒತ್ತಾಯಿಸಿ ರಾಜ್ಯಪಾಲರಿಗೆ ಬಿಜೆಪಿ ನಾಯಕರು ಮನವಿ ಸಲ್ಲಿಸಿ ಒತ್ತಾಯಿಸಿದರು.
ಪ್ರತಿಪಕ್ಷ ನಾಯಕರಾದ ಆರ್.ಅಶೋಕ್ ಮತ್ತು ವಿಧಾನ ಪರಿಷತ್‌ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದ ಬಿಜೆಪಿ ನಿಯೋಗವು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್, ಶಾಸಕರಾದ ಎಸ್.ಆರ್.ವಿಶ್ವನಾಥ್, ಪರಿಷತ್‌ಸದಸ್ಯರು ಮತ್ತು ಪ್ರಮುಖರು ಉಪಸ್ಥಿತರಿದ್ದರು.