ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಸರ್ಕಾರಿ ನೌಕರರ ಭವನದಲ್ಲಿ ಇದೇ ಜುಲೈ 06ರಂದು ಬೆಳಿಗ್ಗೆ 10.30ಕ್ಕೆ ಮಾಜಿ ಸೈನಿಕರ ಕುಂದುಕೊರತೆ ಸಭೆ ಆಯೋಜಿಸಲಾಗಿದೆ.
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ನಿರ್ದೇಶಕರು ಕುಂದುಕೊರತೆ ಸಭೆಗೆ ಆಗಮಿಸಿ, ಮಾಜಿ ಸೈನಿಕರ ಅಹವಾಲು ಆಲಿಸುವರು. ಶಿವಮೊಗ್ಗ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ವ್ಯಾಪ್ತಿಯ ಮಾಜಿ ಸೈನಿಕರು, ಅವರ ಅವಲಂಬಿತರು,
ವೀರನಾರಿಯರು ಹಾಗೂ ವಿವಿಧ ಮಾಜಿ ಸೈನಿಕರ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದು, ತಮ್ಮ ಕುಂದುಕೊರತೆಗಳ ಕುರಿತಂತೆ ಖುದ್ದಾಗಿ ನಿರ್ದೇಶಕರನ್ನು ಭೇಟಿಯಾಗಿ ಮನವಿ ಸಲ್ಲಿಸಬಹುದು.
ಕುಂದುಕೊರತೆಗಳನ್ನು ಇದೇ ಜುಲೈ 05ರ ಸಂಜೆ 5 ಗಂಟೆಯೊಳಗಾಗಿ [email protected] ಗೆ ಮಿಂಚಂಚೆ ಮೂಲಕವೂ ಸಲ್ಲಿಸಲು ಕೋರಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182220925 ಅನ್ನು ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.