ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಜನರ ಸಂಕಷ್ಟಗಳನ್ನು ಅರಿತು ಕಾಂಗ್ರೆಸ್ ಪಕ್ಷ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.
ಪ್ರಧಾನಮಂತ್ರಿಗಳು ಅವುಗಳನ್ನು ಟೀಕಿಸಿ, ದೇಶದಲ್ಲಿ ಅಪಪ್ರಚಾರ ಮಾಡಿದ್ದರು. ಆದರೆ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಎಲ್ಲ ಜಾತಿ, ವರ್ಗ, ಸಮುದಾಯದ ಫಲಾನುಭವಿಗಳಿಗೆ ಯಶಸ್ವಿಯಾಗಿ ತಲುಪಿಸಿದ್ದೇವೆ.
ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ನಿಲ್ಲಿಸುವುದಿಲ್ಲ, ನಿಲ್ಲಿಸುವುದಿಲ್ಲ ಎಂದು ಗ್ಯಾರಂಟಿ ಸಮಿತಿ ಅಧ್ಯಕ್ಷ ಹೆಚ್.ಎಂ ರೇವಣ್ಣ ತಿಳಿಸಿದ್ದಾರೆ.

