ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿರೋಧ ಪಕ್ಷಗಳ ಸೇಡಿನ ರಾಜಕಾರಣಕ್ಕೆ ಉಚ್ಛ ನ್ಯಾಯಾಲಯ ತಕ್ಕ ಉತ್ತರ ನೀಡಿದೆ ಎಂದು ಕಾಂಗ್ರೆಸ್ ತಿಳಿಸಿದೆ.
ಈಗಾಗಲೇ ಲೋಕಾಯುಕ್ತ ಸಂಸ್ಥೆ ತನಿಖೆ ನಡೆಸುತ್ತಿರುವ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧದ ರಾಜಕೀಯ ಪಿತೂರಿಗೆ ಕೊನೆ ಹಾಡಿದೆ ಎಂದು ಕಾಂಗ್ರೆಸ್ ತಿಳಿಸಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪರ ಆಡಳಿತ, ಜನಪ್ರಿಯತೆಯನ್ನು ಸಹಿಸದ ಬಿಜೆಪಿ – ಜೆಡಿಎಸ್ ಪಕ್ಷಗಳ ಪೂರ್ವಯೋಜಿತ ಷಡ್ಯಂತ್ರ ತನಿಖೆಯಿಂದ ಬಯಲಾಗಲಿದೆ ಎಂದು ಕಾಂಗ್ರೆಸ್ ತಿಳಿಸಿದೆ.