ಶಾಸಕ ವೀರೇಂದ್ರ ಪಪ್ಪಿ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಹೈಕೋರ್ಟ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆನ್​ಲೈನ್ ಮತ್ತು ಆಫ್​ಲೈನ್ ಅಕ್ರಮ ಬೆಟ್ಟಿಂಗ್ ಪ್ರಕರಣದ ಆರೋಪಿ ಚಿತ್ರದುರ್ಗದ ಶಾಸಕ ಕೆ.ಸಿ.ವೀರೇಂದ್ರ ಅವರನ್ನು ಬಿಡುಗಡೆ ಮಾಡುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈ ಕೋರ್ಟ್ ವಜಾ ಮಾಡಿ ಆದೇಶಿಸಿದೆ.

ಶಾಸಕರ ಪತ್ನಿ ಡಿ.ಆರ್‌.ಚೈತ್ರಾ ಅವರು ಹೈಕೋರ್ಟ್ ಅರ್ಜಿ ಸಲ್ಲಿಸಿ ಕಾನೂನು ಬಾಹಿರವಾಗಿ ಬಂಧಿಸಲಾಗಿದ್ದು ಬಿಡುಗಡೆಗೆ ಆದೇಶಿಸಬೇಕು ಎಂದು ಕೋರಿ ಅರ್ಜಿ ವಜಾಗೊಳಿಸಿ ಆದೇಶಿಸಿದೆ.

- Advertisement - 

ಕೆ.ಸಿ.ವೀರೇಂದ್ರ ಅವರನ್ನು ಪಿಎಂಎಲ್ ಕಾಯ್ದೆಯಡಿ ಜಾರಿ ನಿರ್ದೇಶನಾಲಯವು ಬಂಧಿಸಿರುವ ಕ್ರಮ ಕಾನೂನುಬಾಹಿರ ಎಂದು ಘೋಷಿಸುವಂತೆ ಪತ್ನಿ ಚೈತ್ರಾ ತಮ್ಮ ಅರ್ಜಿಯಲ್ಲಿ ಕೋರಿದ್ದರು.

ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಆದೇಶವನ್ನು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ನ್ಯಾಯಪೀಠ ಬುಧವಾರ ಪ್ರಕಟಿಸಿತು.

- Advertisement - 

ಅಕ್ರಮ ಬೆಟ್ಟಿಂಗ್​ ಆರೋಪ ಸಂಬಂಧ ಅರ್ಜಿದಾರರ ಪತಿಯ ವಿರುದ್ಧ ಐದು ಪ್ರಕರಣಗಳು ದಾಖಲಾಗಿದ್ದು, ನಾಲ್ಕು ಪ್ರಕರಣಗಳು ಅವರ ಪರವಾಗಿಯೇ ಇದೆ. ಆದರೆ, ಮತ್ತೊಂದು ಪ್ರಕರಣ ವಿಚಾರಣಾ ಹಂತದಲ್ಲಿದ್ದು, ಈ ಸಂದರ್ಭದಲ್ಲಿ ಬಿಡುಗಡೆಗೆ ಆದೇಶ ನೀಡಲಾಗದು ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಪ್ರಕರಣದ ಹಿನ್ನೆಲೆ:
ದೇಶದ ಗೋವಾ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಅಕ್ರಮವಾಗಿ ಆನ್​ಲೈನ್ ಮತ್ತು ಆಫ್​ಲೈನ್ ಬೆಟ್ಟಿಂಗ್ ನಡೆಸಿದ ಆರೋಪದಲ್ಲಿ ಶಾಸಕ ವೀರೇಂದ್ರ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು.

ಇದನ್ನು ಪ್ರಶ್ನಿಸಿರುವ ಅವರ ಪತ್ನಿ, ತನ್ನ ಪತಿಯನ್ನು ಕಾನೂನುಬಾಹಿರವಾಗಿ ಇಡಿ ಅಧಿಕಾರಿಗಳು ಬಂಧನ ಮಾಡಲಾಗಿದೆ. ಇದು ಸಂವಿಧಾನದ ಪರಿಚ್ಛೇದ 19 ಮತ್ತು 21ರಲ್ಲಿ ಲಭ್ಯವಾಗಿರುವ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ತಕ್ಷಣ ವೀರೇಂದ್ರ ಅವರನ್ನು ಬಿಡುಗಡೆ ಮಾಡಲು ನಿರ್ದೇಶನ ನೀಡಬೇಕು ಎಂದು ಪತ್ನಿ ಕೋರಿ ಅರ್ಜಿ ಸಲ್ಲಿಸಿದ್ದರು.

 

 

Share This Article
error: Content is protected !!
";