ಸ್ವಯಂ ಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ ಹೈಕೋರ್ಟ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ಆರ್​ಸಿಬಿ ಐಪಿಎಲ್ ವಿಜಯೋತ್ಸವ ಆಚರಣೆ ಸಂದರ್ಭ ಸಂಭವಿಸಿದ ಕಾಲ್ತುಳಿತದಿಂದ 11 ಜನರ ಸಾವಿಗೆ ಸಂಬಂಧಿಸಿದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ.

- Advertisement - 

ಸರ್ಕಾರಕ್ಕೆ ಈ ಘಟನೆ ಬಗ್ಗೆ ವರದಿ ಸಲ್ಲಿಸಲು ಸೂಚನೆ ನೀಡಿದ್ದು, ಪತ್ರಿಕೆಗಳಲ್ಲಿ ಬಂದ ವರದಿ ಆಧರಿಸಿ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಳ್ಳಲಾಗಿದೆ. ಬುಧವಾರ ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಘಟನೆ ತೀವ್ರ ಕಳವಳಕಾರಿಯಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಪೀಠ ಹೇಳಿದೆ.

- Advertisement - 

ಭದ್ರತಾ ಕ್ರಮಗಳ ಮಾಹಿತಿ ನೀಡಲು ಸರ್ಕಾರಕ್ಕೆ ಪೀಠ ಸೂಚನೆ ನೀಡಿದೆ. ವಿಚಾರಣೆ ವೇಳೆ, ಹೈಕೋರ್ಟ್​​​ನಲ್ಲಿ ಎಜಿ ಶಶಿಕಿರಣ್ ಶೆಟ್ಟಿ ಉಪಸ್ಥಿತರಿದ್ದರು. ಬಳಿಕ ಮಾತನಾಡಿದ ಅವರು, ಹೈಕೋರ್ಟ್ ನೀಡುವ ಸೂಚನೆಗಳನ್ನು ಪಾಲಿಸಲಾಗುವುದು. ನಡೆದ ಘಟನೆ, ಸರ್ಕಾರದ ಕ್ರಮ ಎಲ್ಲದರ ಮಾಹಿತಿಯನ್ನು ಉಚ್ಚ ನ್ಯಾಯಾಲಯಕ್ಕೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಈ ಘಟನೆ ಕುರಿತು ಈಗಾಗಲೇ ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದೆ. ಈ ಕುರಿತ ಎಲ್ಲಾ ವಿವರಗಳನ್ನು ಕೋರ್ಟ್​​ಗೆ ಒದಗಿಸುವುದಾಗಿ ಎಜಿ ಶಶಿಕಿರಣ್ ಶೆಟ್ಟಿ ಹೇಳಿದರು.

- Advertisement - 

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಲಾಗಿದೆ. 11 ಅಸಹಜ ಸಾವು ಪ್ರಕರಣಗಳನ್ನು ದಾಖಲಿಸಲಾಗಿದೆ. ಆದರೆ, ಎಫ್​ಐಆರ್ ದಾಖಲಿಸದೇ ಇರುವ ಪೊಲೀಸರ ನಡೆ ಅನುಮಾನಗಳಿಗೆ ಕಾರಣವಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳ ಸೂಚನೆ ಮೇರೆಗೆ ಅಸಹಜ ಸಾವು ಪ್ರಕರಣ ದಾಖಲಿಸಲಾಗಿದೆ ಎನ್ನಲಾಗಿದೆ.

ಇದರ ಮಧ್ಯ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಘಟನೆ ಸಂಬಂಧ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಪ್ರಕರಣ ಕೂಡ ಜರುಗಿದೆ.

ಪೊಲೀಸ್ ಕಮಿಷನರ್​  ಭೇಟಿ-
ಘಟನೆ ನಡೆದ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.
ಚಿನ್ನಸ್ವಾಮಿ ಕ್ರೀಡಾಂಗಣದ ಗೇಟ್ ನಂಬರ್
6, 7, 21 ರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಜನ ಮೃತಪಟ್ಟಿದ್ದರು. ಹೀಗಾಗಿ ಆ ಜಾಗಗಳಿಗೆ ಕಮಿಷನರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Share This Article
error: Content is protected !!
";