ಕಾಲ್ತುಳಿತ 11 ಜನ ಮೃತ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ
11 ಜನ ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಗುರುವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

- Advertisement - 

ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡು ಗುರುವಾರ ಮಧ್ಯಾಹ್ನ ವಿಚಾರಣೆ ನಡೆಸಿತು.

- Advertisement - 

ವಿಚಾರಣೆ ವೇಳೆ ಇಂತಹ ಘಟನೆ ತಡೆಗೆ ಎಸ್‌ಒಪಿ ಇರಬೇಕಲ್ಲವೇ. ವೈದ್ಯಕೀಯ ಸಿಬ್ಬಂದಿ, ಆ್ಯಂಬುಲೆನ್ಸ್ ವ್ಯವಸ್ಥೆ ಇರಬೇಕಲ್ಲವೇ? ಕಾಲ್ತುಳಿತವಾದಾಗ ಏನು ಮಾಡಬೇಕೆಂಬ ಬಗ್ಗೆ ಸಿದ್ಧತೆ ಇರಬೇಕಲ್ಲವೇ? ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಬೇಕಲ್ಲವೇ? ಇಂತಹ ಮಾರ್ಗಸೂಚಿ ಏನಾದರೂ ಪಾಲಿಸಿದ್ದೀರಾ? ಎಂದು ರಾಜ್ಯ ಸರ್ಕಾರಕ್ಕೆ ಹಂಗಾಮಿ ಸಿಜೆ ವಿ.ಕಾಮೇಶ್ವರ ರಾವ್ ಅವರು ಪ್ರಶ್ನಿಸಿದರು.

 ರಾಜ್ಯ ಸರ್ಕಾರದ ಪರವಾಗಿ ಎಜಿ ಶಶಿಕಿರಣ್ ಶೆಟ್ಟಿ ಹಾಜರಿದ್ದು, ಹೈಕೋರ್ಟ್ ನೀಡುವ ಸಲಹೆಗಳನ್ನು ಪಾಲಿಸಲು ಸರ್ಕಾರ ಬದ್ಧವಾಗಿದೆ. ನಾವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪ್ರತಿರೋಧಿಸುವುದಿಲ್ಲ ಎಂದು ಹೇಳಿದರು.
ಜೂನ್
3ರಂದು ಆರ್‌ಸಿಬಿ ಐಪಿಎಲ್ ಟ್ರೋಫಿ ಗೆದ್ದಿತು. ಅದರ ವಿಜಯೋತ್ಸವ ಭದ್ರತೆಗಾಗಿ ಬೆಂಗಳೂರು ಪೊಲೀಸರು ಸಿದ್ಧತೆ ನಡೆಸಿದ್ದರು.

- Advertisement - 

ಬಂದೋಬಸ್ತ್​ ಗಾಗಿ 1,643 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿತ್ತು. ವಾಟರ್ ಟ್ಯಾಂಕರ್, ಕೆಎಸ್‌ಆರ್​ಪಿ ತುಕಡಿ ಸೇರಿದಂತೆ ಹಲವು ವ್ಯವಸ್ಥೆ ಮಾಡಲಾಗಿತ್ತು. ಕಾಲ್ತುಳಿತ ಸಂಭವಿಸಿ 56 ಜನ ಗಾಯಗೊಂಡಿದ್ದಾರೆ. ಈ ಪೈಕಿ ಐವರು ಮಹಿಳೆಯರು ಹಾಗೂ 6 ಪುರುಷರು ಮೃತಪಟ್ಟಿದ್ದಾರೆ. ಕೋಲಾರ, ಉತ್ತರ ಕನ್ನಡ, ತುಮಕೂರು, ಯಾದಗಿರಿ, ಮಂಡ್ಯದಿಂದಲೂ ಬೆಂಗಳೂರಿಗೆ ಜನ ಆಗಮಿಸಿದ್ದರು. ಒಟ್ಟು 2.5 ಲಕ್ಷ ಜನ ಬೆಂಗಳೂರಿಗೆ ಬಂದಿದ್ದರು ಎಂದು ಕೋರ್ಟ್​ ಎಜಿ ಅವರು ಮಾಹಿತಿ ನೀಡಿದರು.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 34,600 ಜನರಿಗಷ್ಟೇ ವ್ಯವಸ್ಥೆ ಇದೆ. 33 ಸಾವಿರ ಜನರಿಗಷ್ಟೇ ಟಿಕೆಟ್ ನೀಡುತ್ತಾರೆ. ಆದರೆ ಎರಡೂವರೆ ಲಕ್ಷ ಜನರು ಬಂದಿದ್ದರು ಎಂದು ಎಜಿ ಅವರು ಕೋರ್ಟ್ ಮಾಹಿತಿ ನೀಡಿದರು.

 ಇದೇ ಸಂದರ್ಭದಲ್ಲಿ ನ್ಯಾಯಾಲಯವು ಇಂತಹ ದೊಡ್ಡ ಕಾರ್ಯಕ್ರಮ ನಡೆದಾಗ ಪೂರ್ವ ಸಿದ್ಧತೆ ಏನಿತ್ತು? ಎಂದು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಎಜಿ, ರಾಯಲ್ ಚಾಲೆಂಜರ್ಸ್ ಟಿಕೆಟ್ ಹಂಚಿಕೆ ಮಾಡುತ್ತದೆ. ಸ್ಟೇಡಿಯಂನ ಎಲ್ಲಾ ವ್ಯವಸ್ಥೆ ಅವರೇ ಮಾಡುತ್ತಾರೆ.

ಬೆಂಗಳೂರಿನೆಲ್ಲೆಡೆ ಬೆಳಗಿನ ಜಾವ 4 ಗಂಟೆಯಿಂದಲೇ ಜನ ಬರುತ್ತಿದ್ದರು. 3 ಗಂಟೆಯೊಳಗೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಜನದಟ್ಟಣೆಯಾಗಿತ್ತು. ರಾಜ್ಯವಲ್ಲದೇ ಅನ್ಯ ರಾಜ್ಯದಿಂದಲೂ ಜನ ಬಂದಿದ್ದರು. ಕೊಯಮತ್ತೂರಿನ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಅವರು ಕೋರ್ಟ್ ಗೆ ಮಾಹಿತಿ ನೀಡಿದರು.

ಘಟನೆ ಬಗ್ಗೆ ವರದಿ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಇದೇ ಜೂನ್ 10ಕ್ಕೆ ಮುಂದೂಡಿ ಆದೇಶ ಮಾಡಿತು.

 

Share This Article
error: Content is protected !!
";