ಚಂದ್ರವಳ್ಳಿ ನ್ಯೂಸ್, ಯಾದಗಿರಿ:
ಯಾದಗಿರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನೀಡುವ ಹೊಯ್ಸಳ ಪ್ರಶಸ್ತಿಗೆ ಇಡ್ಲೂರ ಗ್ರಾಮದ ಯುವ ಪ್ರತಿಭೆ ಬಾಜನರಾಗಿದ್ದಾರೆ.
ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಇಡ್ಲೂರ ಗ್ರಾಮದ ವಿದ್ಯಾರ್ಥಿ ಚಂದನ್ ಎಸ್ ಅವಂಟಿ ತಂದೆ ಶಂಕರಲಿಂಗಪ್ಪ ಅವರು ಹೊಯ್ಸಳ ಪ್ರಶಸ್ತಿಗೆ ಬಾಜನರಾಗಿದ್ದಾರೆ.
ಅಸಾಧಾರಣ ಪ್ರತಿಭೆಯುಳ್ಳ ಮಕ್ಕಳಿಗೆ ನೀಡುವ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಚಂದನ್ ಎಸ್ ಅವಂಟಿ ಅವರು ಆಯ್ಕೆಯಾಗಿದ್ದು ಯಾದಗಿರಿ ಜಿಲ್ಲಾಡಳಿತವು ಗಣರಾಜ್ಯೋತ್ಸವ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಪುರಸ್ಕಾರಿಸಿತು.
ಈ ಸಂಧರ್ಭದಲ್ಲಿ ಯಾದಗಿರಿ ಜಿಲ್ಲೆಯ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ, ಯಾದಗಿರಿ ಜಿಲ್ಲೆಯ ಶಾಸಕರಾದ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಸೇರಿದಂತೆ ನಾಗರಾಭಿವೃದ್ಧಿ ಅಧ್ಯಕ್ಷರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಉಪಸ್ಥಿತರಿದ್ದರು.