ಚಂದ್ರವಳ್ಳಿ ನ್ಯೂಸ್, ಆನೇಕಲ್ (ಬೆಂಗಳೂರು ಗ್ರಾಮಾಂತರ ಜಿಲ್ಲೆ):
ಪತ್ನಿಯನ್ನು ನಡು ಬೀದಿಯಲ್ಲೇ ಪತಿ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ ಹೆಬ್ಬಗೋಡಿ ರಾಮಯ್ಯ ಬಡಾವಣೆಯಲ್ಲಿ ನಡೆದಿದೆ.
ತಿರುಪಾಳ್ಯ ಮೂಲದ ಗಂಗಾ (27) ಕೊಲೆಯಾದ ದುರ್ವೈವಿ ಪತ್ನಿ. ಪತಿ ಮೋಹನ್ ರಾಜ್ ನಿಂದಲೇ ಕೊಲೆಯಾಗಿದ್ದಾಳೆ.
ದಂಪತಿಯ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದ್ದು, ಮಾತಿನ ಭರಾಟೆ ಜೋರಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಇರಿತಕ್ಕೊಳಗಾದ ಗಂಗಾಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಹೆಬ್ಬಗೋಡಿ ಪೊಲೀಸರು, ಪರಿಶೀಲನೆ ನಡೆಸಿ ಆರೋಪಿ ಮೋಹನ್ ರಾಜ್ನನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.