ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಗೂಡಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಘಟನೆ ಚಿತ್ರದುರ್ಗ ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಎಗ್ಗಿಲ್ಲದೆ ಸಾಗಿದೆ.
ಅಕ್ರಮ ಮದ್ಯ ಮಾರಾಟದ ವಿರುದ್ಧ ಸ್ಥಳೀಯರು ಭಾರೀ ಆಕ್ರೋಶ ವ್ಯಕ್ತಪಡಿಸಿ ಅಬಕಾರಿ ಆಡಳಿತದ ವಿರುದ್ಧ ಕಿಡಿ ಕಾರಿದ್ದಾರೆ.
ಗ್ರಾಮದ ಒಂದು ಗೂಡಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂಬ ಆರೋಪದ ಹಿನ್ನೆಲೆ, ಸ್ಥಳೀಯರು ಆ ಅಂಗಡಿಗೆ ನುಗ್ಗಿ ಮದ್ಯದ ಬಾಟಲಿಗಳನ್ನು ಬೀದಿಗೆಸೆದು ತಮ್ಮ ಆಕ್ರೋಶ ಹೊರಹಾಕಿದ ಘಟನೆ ಕೂಡ ಜರುಗಿದೆ.
ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದರೂ ಸಂಬಂಧಿಸಿದ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಕ್ರಮ ಮದ್ಯ ಮಾರಾಟ ಕುರಿತು ತಕ್ಷಣ ಕ್ರಮ ಕೈಗೊಂಡು ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸಲು ಹಾಗೂ ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ನೋಡಿಕೊಳ್ಳುವಂತೆ ಸ್ಥಳೀಯರು ಪೊಲೀಸರಲ್ಲಿ ಮತ್ತು ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ.

