ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
370ನೇ ವಿಧಿ ರದ್ದತಿ ವಿರೋಧಿಸಿದ್ದ ನ್ಯಾಷನಲ್ ಕಾನ್ಸರೆನ್ಸ್ ನಾಯಕ, ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಇದೀಗ ಅದರ ಪರ ಮಾತನಾಡಿದ್ದಾರೆ. 2019ರ ನಂತರ ಕಣಿವೆ ರಾಜ್ಯದಲ್ಲಿ ಪ್ರತ್ಯೇಕತಾವಾದಿ ಚಟುವಟಿಕೆಗಳು ಇಳಿಮುಖವಾಗಿವೆ ಎಂದಿದ್ದಾರೆ ಎಂದು ಬಿಜೆಪಿ ತಿಳಿಸಿದೆ.
ರಾಜ್ಯಕ್ಕೆ ವಿಶೇಷ ಅಧಿಕಾರ ನೀಡುವ ವಿಧಿ ರದ್ದಾದ ನಂತರ ಅಲ್ಲಿ ಆತಂಕವಾದಿಗಳ ಚಟುವಟಿಕೆ ಕಡಿಮೆಯಾಗಿ ಪರಿಸ್ಥಿತಿ ಸುಧಾರಿಸಿದೆ ಎನ್ನುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ದಿಟ್ಟ ನಿಲುವಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ರಾಜಕೀಯ ಇಚ್ಛಾಶಕ್ತಿಯ ಕೊರತೆಯ ಕಾರಣದಿಂದ ಜಮ್ಮು ಕಾಶ್ಮೀರದ 370 ನೇ ವಿಧಿಯನ್ನು ಹಿಂದೆ ನಿರ್ಮೂಲನೆ ಮಾಡಲು ಸಾಧ್ಯವಾಗಿರಲಿಲ್ಲ. ಭಾರತೀಯ ಕಾಂಗ್ರೆಸ್ ಪಕ್ಷ ಯಾವಾಗಲೂ ಜಮ್ಮು ಮತ್ತು ಕಾಶ್ಮೀರವನ್ನು ಅಸ್ಥಿರವಾಗಿರಿಸಿತ್ತು.
ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವು 370 ನೇ ವಿಧಿ ಅನ್ನು ರದ್ದುಪಡಿಸಿದ ಬಳಿಕ ಕಾಶ್ಮೀರದ ಚಿತ್ರಣವೇ ಬದಲಾಗಿದೆ. ಭಯೋತ್ಪಾದಕ ಕೃತ್ಯ ಇಳಿಮುಖವಾಗಿದೆ, ಪಂಚಾಯತ್ ರಾಜ್ ವ್ಯವಸ್ಥೆ ಬಲಗೊಂಡಿದೆ ಮತ್ತು ಪ್ರಜಾಪ್ರಭುತ್ವದ ಪುನರುಜ್ಜೀವನವಾಗಿದೆ. ಅಭಿವೃದ್ಧಿ, ಶಾಂತಿ ಮತ್ತು ಸಮೃದ್ಧಿಯ ಹೊಸ ಇತಿಹಾಸ ಸೃಷ್ಟಿಯಾಗಿದೆ ಎಂದು ಬಿಜೆಪಿ ತಿಳಿಸಿದೆ.