ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿತ್ರದುರ್ಗ ನಗರದ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಚಿತ್ರದುರ್ಗ ಜಿಲ್ಲಾ ಶಾಖೆ ವತಿಯಿಂದ ಏರ್ಪಡಿಸಿದ ಯುವ ರೆಡ್ ಕ್ರಾಸ್, ಬೆಂಗಳೂರು ವಿಭಾಗ ಮಟ್ಟದ ಶಿಬಿರದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಕೋಶದ ರಾಜ್ಯ ಸಂಯೋಜಕ ಗಣನಾಥ್ ಶೆಟ್ಟಿ ಹಾಗೂ ಸಭಾಪತಿಗಳು ಉಡುಪಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆ ಅವರನ್ನು ಚಿತ್ರದುರ್ಗ ಜಿಲ್ಲಾ ಉಪನ್ಯಾಸಕರ ಸಂಘದ ಮಾಜಿ ಅಧ್ಯಕ್ಷ ಎಸ್. ಲಕ್ಷ್ಮಣ ಸನ್ಮಾನಿಸಿದರು.
ಸನ್ಮಾನಿಸಿ ನಂತರ ಮಾತನಾಡಿ ರೆಡ್ ಕ್ರಾಸ್ ಸಂಸ್ಥೆ ಒಂದು ಅಂತರಾಷ್ಟ್ರೀಯ ಮಾನವೀಯ ಸಂಘಟನೆಯಾಗಿದ್ದು ನೈಸರ್ಗಿಕ ವಿಕೋಪಗಳು ಮತ್ತು ಸಂಘರ್ಷಗಳ ಸಮಯದಲ್ಲಿ ನೆರವು ನೀಡುತ್ತದೆ. ವಿಪತ್ತು ನಿರ್ವಹಣೆ ಆರೋಗ್ಯ ಮತ್ತು ಆರೋಗ್ಯ ಶಿಕ್ಷಣ ರಕ್ತದಾನ ಮಾನವೀಯ ಮೌಲ್ಯಗಳು ಮುಂತಾದ ಕಾರ್ಯಗಳನ್ನು ಮಾಡುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಲ್ಲಿ ಭಾಗವಹಿಸಬೇಕು ಎಂದರು.
ಗಣನಾಥ್ ಶೆಟ್ಟಿ ರವರು ರಾಜ್ಯ ಎನ್.ಎಸ್.ಎಸ್. ಕೋಶ ಬೆಂಗಳೂರಿನಲ್ಲಿ ರಾಜ್ಯ ಸಂಯೋಜಕರಾಗಿ ಪ್ರಾಚಾರ್ಯರಾಗಿ ಹಾಗೂ ಇತರೆ ಸಂಘ ಸಂಸ್ಥೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಇವರ ಸೇವೆಯನ್ನು ಗುರುತಿಸಿ ಸರ್ಕಾರ ರಾಜ್ಯ ಪ್ರಶಸ್ತಿ, ರಾಷ್ಟ್ರ ಪ್ರಶಸ್ತಿ ಮತ್ತು ಜಿಲ್ಲಾ ಪ್ರಶಸ್ತಿಗಳನ್ನು ನೀಡಿ ಗೌರವಿಸಿದೆ. ಈಗ ರೆಡ್ ಕ್ರಾಸ್ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಇವರ ಸೇವೆ ಶ್ಲಾಘನೀಯ ಎಂದರು.
ಸನ್ಮಾನಿತ ಗಣನಾಥ್ ಶೆಟ್ಟಿ ಮಾತನಾಡಿ ನಾನು ರಾಜ್ಯ ಎನ್. ಎಸ್.ಎಸ್ ಕೋಶದಲ್ಲಿ ಕರ್ತವ್ಯ ನಿರ್ವಹಿಸುವಾಗ ರಾಜ್ಯ, ಜಿಲ್ಲಾ, ವಿಶ್ವವಿದ್ಯಾಲಯ ಹಾಗೂ ಶಾಲಾ ಕಾಲೇಜುಗಳ ಮಟ್ಟದಲ್ಲಿ ಉತ್ತಮ ಎನ್ ಎಸ್ ಎಸ್ ಶಿಬಿರ ಹಾಗೂ ಕಾರ್ಯಕ್ರಮಗಳನ್ನು ನಡೆಸಿ ಉತ್ತಮ ಎನ್ ಎಸ್ ಎಸ್ ಕಾರ್ಯಕ್ರಮಧಿಕಾರಿ ಹಾಗೂ ಶಿಬಿರಾರ್ಥಿಗಳನ್ನು ತಯಾರು ಮಾಡಿ ಅವರನ್ನು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿ ಪ್ರಶಸ್ತಿ ನೀಡುವಂತೆ ಪ್ರಯತ್ನಿಸಿದ್ದೇನೆ ಎಂದರು. ಈಗ ನಾನು ಉಡುಪಿ ಜಿಲ್ಲಾ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಲ್ಲಿ ಸಭಾಪತಿಗಳಾಗಿ ಕರ್ತವ್ಯ ನಿರ್ವಹಿಸಿ ರೆಡ್ ಕ್ರಾಸ್ ಸಂಸ್ಥೆ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಶಾಂತವೀರ ಮುರುಘರಾಜೇಂದ್ರ ಸ್ವಾಮೀಜಿ, ಬತರೂರು ರಾಜೀವ್ ಶೆಟ್ಟಿ, ಗಾಯಿತ್ರಿ ಶಿವರಾಂ, ಡಾ.ಪ್ರಿಯ ಪುರಾಣಿಕ್, ಮೀರಾ ಶಿವಲಿಂಗಯ್ಯ, ಪ್ರೊ. ವೆಂಕಟೇಶ್, ಎನ್ ಎಸ್ ಎಸ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ತಿಮ್ಮಣ್ಣ ಇತರರು ಉಪಸ್ಥಿತರಿದ್ದರು.

