ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದ ರುಮಾಲೆ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೆ ಗೌಡರ ಬಣ )ವತಿಯಿಂದ 70ನೇ ಕನ್ನಡ ರಾಜ್ಯೋತ್ಸವವನ್ನು ಅತಿ ವಿಜೃಂಭಣೆಯಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ತ. ನ. ಪ್ರಭುದೇವ್, ಕನ್ನಡಪರ ಹೋರಾಟಗಾರ ಡಿ. ಸಿ. ಚೌಡರಾಜ್ ಸೇರಿದಂತೆ ಹಲವು ಕನ್ನಡ ಪರ ಹೋರಾಟಗಾರರನ್ನು ಗೌರವಿಸಲಾಯಿತು. ಕಾರ್ಯಕ್ರಮ ದಲ್ಲಿ ಕರವೇ ತಾಲೂಕು ಅಧ್ಯಕ್ಷ ಆರಾಧ್ಯ, ನಾಗರಾಜು (ಜೆಡಿಎಸ್ ನಾಗಣ್ಣ )ಸೇರಿದಂತೆ ಸಂಘಟನೆಯ ಎಲ್ಲಾ ಪದಾಧಿಕಾರಿಗಳು, ಮುಖಂಡರು ಭಾಗವಹಿಸಿದ್ದರು.

