ಹಿಂದುಳಿದ ವರ್ಗಗಳಿಗೆ ಅರಸು ಕೊಡುಗೆ ಅವಿಸ್ಮರಣೀಯ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
 ಇಲ್ಲಿನ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸ್‌ ಅವರ 44ನೇ ಪುಣ್ಯಸ್ಮರಣೆ ಕಾರ್ಯಕ್ರಮ ಆರ್‌ಎಲ್‌ಜೆಐಟಿ ಆವರಣದಲ್ಲಿ ಶುಕ್ರವಾರ ನಡೆಯಿತು.

- Advertisement - 

ಅರಸು ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪ ನಮನ ಸಲ್ಲಿಸಿದರು.ಈ ವೇಳೆ ಮಾತನಾಡಿದ ಲಯನ್ಸ್‌ ಕ್ಲಬ್‌ ಅಧ್ಯಕ್ಷ ಜೆ.ಆರ್.ರಾಕೇಶ್‌, ಹಿಂದುಳಿದ ವರ್ಗಗಳ ದನಿಯಾಗಿ, ಯುವಜನರ ಆಶೋತ್ತರಗಳನ್ನು ಪ್ರಭಾವಿಸಿದ ಅರಸು ಅವರು ಜಾಲಪ್ಪ ಅವರ ರಾಜಕೀಯ ಬೆಳವಣಿಗೆಗೆ ಪ್ರೇರಕಶಕ್ತಿಯಾಗಿದ್ದರು ಎಂದು ತಿಳಿಸಿದರು.

- Advertisement - 

ಮುಖ್ಯ ಭಾಷಣಕಾರರಾಗಿ ಮಾತನಾಡಿದ ಲಯನ್ಸ್‌ ಕ್ಲಬ್‌ ಉಪಾಧ್ಯಕ್ಷ ಪ್ರೊ.ಕೆ.ಆರ್.ರವಿಕಿರಣ್‌, ರಾಜ್ಯದಲ್ಲಿ ಹಿಂದುಳಿದ ವರ್ಗಗಳಿಗೆ ಪ್ರಬಲ ಅಸ್ತಿತ್ವವನ್ನು ಪ್ರತಿಪಾದಿಸಿದ ಅರಸು ಅವರು, ಉಳುವವನೇ ಭೂಮಿಯ ಒಡೆಯ ಎಂಬ ಘೋಷವಾಕ್ಯದಡಿ ಭೂ ಒಡೆತನವನ್ನು ಶೋಷಿತವರ್ಗಗಳಿಗೆ ನೀಡಿದರು. ಎಲ್‌.ಜಿ.ಹಾವನೂರ್‌ ಅವರ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಆಯೋಗವನ್ನು ರಚಿಸಿ, ಪ್ರಬಲ ಸಮುದಾಯಗಳ ನಡುಗೆ ಹಿಂದುಳಿದ ವರ್ಗಗಳಿಗೂ ಅವಕಾಶ ಮತ್ತು ಸಮಾನತೆಯನ್ನು ಒದಗಿಸುವ ಸಂಕಲ್ಪ ಮಾಡಿದರು. ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿದರು. ಅರಸು ಅವರ ಒತ್ತಾಸೆಯಿಂದಲೇ ಆರ್.ಎಲ್.ಜಾಲಪ್ಪ ಅವರು ಮೊದಲ ಬಾರಿಗೆ ವಿಧಾನಪರಿಷತ್ತಿನ ಸದಸ್ಯರಾಗಿ ಆಯ್ಕೆಯಾದರು ಎಂದು ತಿಳಿಸಿದರು.

ಲಯನ್ಸ್‌ ಜಿಇಟಿ ಸಂಯೋಜಕ ಎಂ.ಆರ್.ಶ್ರೀನಿವಾಸ್‌, ಆರ್‌ಎಲ್‌ಜೆಐಟಿ ಪ್ರಾಂಶುಪಾಲ ಡಾ.ವಿಜಯ್‌ ಕಾರ್ತಿಕ್, ಮಾನವ ಸಂಪನ್ಮೂಲ ನಿರ್ದೇಶಕ ಬಾಬುರೆಡ್ಡಿ ನಾಗಸಂದ್ರ, ಉಪಪ್ರಾಂಶುಪಾಲ ಡಾ.ಶಿವಪ್ರಸಾದ್, ಪದವಿ ಕಾಲೇಜು ಪ್ರಾಂಶುಪಾಲ ಡಾ.ನಾಗರಾಜ್, ಪ್ರೌಢಶಾಲೆ ಮುಖ್ಯಶಿಕ್ಷಕ ಜಿಯಾವುಲ್ಲಾಖಾನ್, ಎಸ್‌ಡಿಯುಐಎಂ ಆಡಳಿತಾಧಿಕಾರಿ ಐ.ಎಂ.ರಮೇಶ್‌ಕುಮಾರ್, ವ್ಯವಸ್ಥಾಪಕ ಯತಿನ್, ವಿವಿಧ ವಿಭಾಗಗಳು ಹಾಗೂ ಶೈಕ್ಷಣಿಕ ಘಟಕಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿ ಪಾಲ್ಗೊಂಡರು.

- Advertisement - 

 

 

Share This Article
error: Content is protected !!
";