ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕದ ಜನರು ನೆರೆಗೆ ತತ್ತರಿಸಿದ್ದರೂ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮಾತ್ರ ಸಂತ್ರಸ್ತರನ್ನು ನೀರಲ್ಲಿ ಕೈಬಿಟ್ಟು,
ನರಳುವಂತೆ ಮಾಡಿದೆ. ಸಮಸ್ಯೆ ಆಲಿಸಬೇಕಾದ ಜಿಲ್ಲಾ ಉಸ್ತುವಾರಿ ಸಚಿವರು ಕಾಣದಂತೆ ಮಾಯವಾಗಿದ್ದಾರೆ.! ಎಂದು ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಪೋಟೋ ಸಹಿತ ಪ್ರಕಟಿಸಿ ಆಕ್ಷೇಪ ವ್ಯಕ್ತಪಡಿಸಿದೆ.
ಸಿಎಂ ಸಿದ್ದರಾಮಯ್ಯ ನವರೇ, ಕೂಡಲೇ ಬೆಳೆನಷ್ಟ ಸಮೀಕ್ಷೆ ನಡೆಸಿ ಪರಿಹಾರ ವಿತರಿಸಿ, ಮನೆ ಕಳೆದುಕೊಂಡ ಸಂತ್ರಸ್ತರ ನೆರವಿಗೆ ಕೂಡಲೇ ಧಾವಿಸಿ ಎಂದು ಬಿಜೆಪಿ ಆಗ್ರಹ ಮಾಡಿದೆ.

