ಲಂಚ ಪಡೆಯುವಾಗ ಇಂಧನ ಸಚಿವರ ವಿಶೇಷಾಧಿಕಾರಿ ಬಂಧನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿದ್ಯುತ್ ಸಂಪರ್ಕಕ್ಕೆ ಅನುಮತಿ(ಎನ್​ಒಸಿ) ನೀಡಲು ಲಂಚ ಪಡೆಯುತ್ತಿದ್ದ ಇಂಧನ ಸಚಿವರ ವಿಶೇಷಾಧಿಕಾರಿ ಮತ್ತು ಕಾರು ಚಾಲಕರನ್ನು ಲೋಕಾಯುಕ್ತ ಪೊಲೀಸರು‌ದಾಳಿ ಮಾಡಿ ಬಂಧಿಸಿದ್ದಾರೆ.

ಲೋಕಾಯುಕ್ತ ಪೊಲೀಸರು ದಾಳಿ ಮಾಡಿ 50 ಸಾವಿರ ರೂಪಾಯಿ ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಜ್ಯೋತಿ ಪ್ರಕಾಶ್ ಹಾಗೂ ಅವರ ಕಾರು ಚಾಲಕ ನವೀನ್‌ಎಂಬಾತನನ್ನು ಬಂಧಿಸಲಾಗಿದೆ.

- Advertisement - 

ಕೆ‍ಪಿಟಿಸಿಎಲ್‌ಕಾರ್ಯನಿರ್ವಾಹಕ ಎಂಜಿನಿಯರ್ ಹಾಗೂ ಇಂಧನ ಸಚಿವರ ವಿಶೇಷಾಧಿಕಾರಿ ಜ್ಯೋತಿ ಪ್ರಕಾಶ್‌ಅವರು ವಿದ್ಯುತ್ ಸಂಪರ್ಕ ಕಲ್ಪಿಸಲು ಎನ್ಒಸಿ ನೀಡಲು ಒಂದು ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದು ಅದರಲ್ಲಿ 50 ಸಾವಿರ ರೂ. ಲಂಚದ ಹಣ ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತರು ಬಂಧಿಸಿದ್ದಾರೆ.

ಬ್ಯಾಡರಹಳ್ಳಿಯ ನಿವಾಸಿ ಕೆ.ಎಂ. ಅನಂತರಾಜು ಅವರು ಬಡಾವಣೆ ನಿರ್ಮಾಣ ಕಾಮಗಾರಿಗೆ ವಿದ್ಯುತ್ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸಿದ್ದರು. ಎನ್ಒಸಿ ಕೊಡಲು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದು ಈ ಕುರಿತು ಅನಂತರಾಜು ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

- Advertisement - 

ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್ ದೇವರಾಜು ನೇತೃತ್ವದ ತಂಡ ದೂರಿನನ್ವಯ ಕಾರ್ಯಾಚರಣೆ ಕೈಗೊಂಡ ಅನಂತರಾಜು ಅವರಿಂದ 50 ಸಾವಿರ ರೂ. ಸ್ವೀಕರಿಸುತ್ತಿದ್ದ ಜ್ಯೋತಿ ಪ್ರಕಾಶ್‌ಮತ್ತು ಅವರ ಚಾಲಕ ನವೀನ್‌ನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

 

Share This Article
error: Content is protected !!
";