ದೆಹಲಿ ಎಎಪಿ ಸರ್ಕಾರದ ಮಾದರಿಯಲ್ಲೇ ರಾಜ್ಯದಲ್ಲೂ ಬಹುಕೋಟಿ ಅಬಕಾರಿ ಹಗರಣ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸ್ಕ್ಯಾಮ್‌ಗ್ರೇಸ್‌ಸರ್ಕಾರದ ಲೂಟಿ ಮಾರ್ಗಗಳು ನೂರಾರು ಇವೆ ಎಂದು ಜೆಡಿಎಸ್ ಆರೋಪ ಮಾಡಿದೆ.

ರಾಜ್ಯವನ್ನು ದಿವಾಳಿ ಎಬ್ಬಿಸಿರುವ ಬರಗೆಟ್ಟ ಕರ್ನಾಟಕ ಕಾಂಗ್ರೆಸ್  ಸರ್ಕಾರ, ಆದಾಯ ಹೆಚ್ಚಿಸಿಕೊಳ್ಳಲು ಇನ್ನಿಲ್ಲದ ಕುತಂತ್ರ ನಡೆಸುತ್ತಿದೆ.

ಅಸ್ತಿತ್ವದಲ್ಲೇ ಇಲ್ಲದ ಪರವಾನಿಗೆಗಳ ಮಾರಾಟಕ್ಕೆ ಅಬಕಾರಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದ್ದು, ಕಾನೂನು ಬಾಹಿರವಾಗಿ ಲೈಸೆನ್ಸ್‌ನೀಡಿ ಸಾವಿರಾರು ಕೋಟಿ ದುಡ್ಡು ಹೊಡೆಯಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ ಎಂದು ಜೆಡಿಎಸ್ ಆರೋಪ ಮಾಡಿದೆ.  

ಅಬಕಾರಿ ಇಲಾಖೆಯಲ್ಲಿ ವರ್ಗಾವಣೆ ದಂಧೆ, ಲೈಸೆನ್ಸ್‌ನವೀಕರಣ, ಮಂಥ್ಲಿ ಮನಿ ಹೆಸರಲ್ಲಿ ಕೋಟಿ ಕೋಟಿ ಹಣವನ್ನು ಅಧಿಕಾರಿಗಳಿಂದ ಸಚಿವರೇ ವಸೂಲಿ ಮಾಡುತ್ತಿದ್ದು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿ ಕಾಂಗ್ರೆಸ್‌ಸರ್ಕಾರದ ಮಾನ ಹರಾಜಾಗಿದೆ. 

ದೆಹಲಿಯಲ್ಲಿ ಎಎಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಬಹುಕೋಟಿ ಅಬಕಾರಿ ಹಗರಣ ಮೀರಿಸುವಂತೆ ಕರ್ನಾಟಕದಲ್ಲಿಯೂ ಸದ್ದಿಲ್ಲದೆ ನಡೆಯುತ್ತಿದೆ ಎಂದು ಜೆಡಿಎಸ್ ಆರೋಪಿಸಿದೆ.

 

 

Share This Article
error: Content is protected !!
";