ಪೋರ್ಟ್ ಬ್ಲೇರ್ ಹೆಸರು ಇನ್ನು ಶ್ರೀ ವಿಜಯಪುರಂ

News Desk

ಚಂದ್ರವಳ್ಳಿ ನ್ಯೂಸ್, ನವದೆಹಲಿ :

ಕೇಂದ್ರ ಸರ್ಕಾರ ಶುಕ್ರವಾರ ಅಂಡಮಾನ್ ಮತ್ತು ನಿಕೋಬಾರ್ ರಾಜಧಾನಿ ಪೋರ್ಟ್ ಬ್ಲೇರ್ ಅನ್ನು ವಿಜಯ ಪುರಂ ಎಂದು ಮರುನಾಮಕರಣ ಮಾಡಿದೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ವಸಾಹತುಶಾಹಿ ಮುದ್ರೆಯಿಂದ ದೇಶವನ್ನು ಮುಕ್ತಗೊಳಿಸುವ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯಿಂದ ಪ್ರೇರಿತರಾಗಿ ಇಂದು ನಾವು ಪೋರ್ಟ್ ಬ್ಲೇರ್ ಅನ್ನು “ಶ್ರೀ ವಿಜಯ ಪುರಂ” ಎಂದು ಮರುನಾಮಕರಣ ಮಾಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

 ಹಿಂದಿನ ಹೆಸರು ವಸಾಹತುಶಾಹಿ ಪರಂಪರೆಯನ್ನು ಹೊಂದಿದ್ದರೂ, ಶ್ರೀ ವಿಜಯ ಪುರಂ ನಮ್ಮ ಸ್ವಾತಂತ್ರ್ಯ ಹೋರಾಟದಲ್ಲಿ ಸಾಧಿಸಿದ ವಿಜಯವನ್ನು ಸಂಕೇತಿಸುತ್ತದೆ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ವಿಶಿಷ್ಟ ಪಾತ್ರವನ್ನು ಸೂಚಿಸುತ್ತದೆ” ಎಂದು ಅಮಿತ್ ಶಾ ಹೇಳಿದ್ದಾರೆ.

 

  

- Advertisement -  - Advertisement - 
Share This Article
error: Content is protected !!
";