ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಿಲ್ಲೆಗಳ ಹೆಸರು ಬದಲಾವಣೆ ರಾಜ್ಯದ ವಿಷಯ. ಅದರಲ್ಲಿ ಕೇಂದ್ರ ಹಸ್ತಕ್ಷೇಪ ಮಾಡುವಂತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಇದಕ್ಕೆ ಕೇಂದ್ರದ ಎಲ್ಲ ಇಲಾಖೆಗಳು ಒಪ್ಪಿಗೆ ನೀಡಿದ್ದವು. ಆದರೆ, ಕೇಂದ್ರದಲ್ಲಿ ಸಚಿವರಾಗಿರುವ ರಾಜ್ಯದ ಕೆಲವರು ಗೃಹ ಇಲಾಖೆಯ ಮೇಲೆ ಒತ್ತಡ ತಂದು ಪತ್ರ ಬರೆಸಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಹೆಸರೇಳದೆ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.
ಜಿಲ್ಲೆಯ ಹೆಸರು ಬದಲಾಯಿಸಿಯೇ ತೀರುತ್ತೇವೆ. ಅವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ರಾಮನಗರದ ಜನರ ಮೇಲೆ ಗದಾಪ್ರಹಾರ ಮಾಡಿದ್ದಾರೆ ಎಂದು ಡಿಸಿಎಂ ಡಿಕೆಶಿ ದೂರಿದರು.