ಸರ್ವಾಧಿಕಾರಿ ಮೆರೆದಂತಹ ಕುಖ್ಯಾತಿ ಕಾಂಗ್ರೆಸ್ ಪಕ್ಷದ್ದು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 
ವಿಶ್ವದಲ್ಲಿ ಪ್ರಜಾಪ್ರಭುತ್ವ ಅನ್ವೇಷಣೆ ಮಾಡಲು ಹೊರಟರೆ ಭಾರತದಲ್ಲಿದೆ ಎನ್ನುವುದಕ್ಕೆ ನಮ್ಮ ಪವಿತ್ರ ಸಂವಿಧಾನವೇ ಸಾಕ್ಷಿ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿಂದು ಸಂವಿಧಾನ ಗೌರವ ಅಭಿಯಾನದ ಅಂಗವಾಗಿ ಆಯೋಜಿಸಿದ್ದ ನಮ್ಮ ಸಂವಿಧಾನ ನಮ್ಮ ಹೆಮ್ಮೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಾಯಿತು. ಭಾರತೀಯ ಪರಂಪರೆ ಹಾಗೂ ಭಾರತೀಯತೆಯನ್ನು ಉಳಿಸಲು ಮಹತ್ವದ ಸಂವಿಧಾನವನ್ನು ಭಾರತಕ್ಕೆ ಕೊಡ ಮಾಡಲೆಂದೇ ಭೂಮಿಗೆ ಇಳಿದು ಬಂದ ಅವತಾರ ಪುರುಷರಂತೆ ಡಾ.ಬಿ.ಆರ್ ಅಂಬೇಡ್ಕರ್ ಅವರನ್ನು ನಾವಿಂದು ಕಾಣುತ್ತಿದ್ದೇವೆ. ಆದರೆ ಅಂಬೇಡ್ಕರ್ ಅವರ ಸಂವಿಧಾನಕ್ಕೆ ಅಪಮಾನ ಮಾಡಿ, ಪವಿತ್ರ ಸಂವಿಧಾನವನ್ನು ಹತ್ತು ಹಲವು ಬಾರಿ ತಮ್ಮ ಸ್ವಾರ್ಥಕ್ಕಾಗಿ ವಿರೂಪ ಗೊಳಿಸಿ ಕರಾಳ ತುರ್ತು ಪರಿಸ್ಥಿತಿಯನ್ನು ಹೇರಿ ಪ್ರಜಾತಂತ್ರ ವ್ಯವಸ್ಥೆಯ ತಲೆಯ ಮೇಲೆ ಕುಳಿತು ಸರ್ವಾಧಿಕಾರಿ ಮೆರೆದಂತಹ ಕುಖ್ಯಾತಿ ಕಾಂಗ್ರೆಸ್ ಪಕ್ಷದ್ದು ಎಂದು ವಾಗ್ದಾಳಿ ಮಾಡಿದ್ದಾರೆ.

ಭಾರತೀಯ ಜನತಾ ಪಾರ್ಟಿ ಸಂವಿಧಾನವನ್ನು, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಿದ್ಧಾಂತವನ್ನು, ಶೋಷಿತ ವರ್ಗದ ಕಲ್ಯಾಣ ಕಾರ್ಯಗಳನ್ನು, ರಾಜಕೀಯ ಕಾರಣಗಳಿಂದ ಹಮ್ಮಿಕೊಳ್ಳಲಿಲ್ಲ, ಬದಲಾಗಿ ಸಂವಿಧಾನದ ಆಶಯಗಳನ್ನು ಈಡೇರಿಸುವಲ್ಲಿ ಪರಿಣಾಮಕಾರಿ ಯೋಜನೆಗಳನ್ನು ನೊಂದವರು, ಬಡವರು, ದಲಿತರು, ಮಹಿಳೆಯರಿಗಾಗಿ ಹಮ್ಮಿಕೊಂಡ ಇತಿಹಾಸ ಭಾರತೀಯ ಜನತಾ ಪಾರ್ಟಿಯದ್ದು. ಬಹುಶಃ ಇಂಥ ಶಕ್ತಿ ಬಿಜೆಪಿಗೆ ಬಂದಿದ್ದರೆ ಅದು ಸಂವಿಧಾನ ಕೊಟ್ಟಂತಹ ಶಕ್ತಿ ಎಂದೇ ನಾವು ನಂಬಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಮುರುಗನ್, ಸಾಮಾಜಿಕ ಕಾರ್ಯಕರ್ತರಾದ ವಾದಿರಾಜ ಸಾಮರಸ್ಯ, ಸಂಸದರಾದ ಬಿ.ವೈ ರಾಘವೇಂದ್ರ, ಮಾಜಿ ಸಚಿವರಾದ ಆರಗ ಜ್ಞಾನೇಂದ್ರ, ಮಾಜಿ ಸಚಿವರು ಹಾಗೂ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ, ಶಾಸಕರಾದ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಧನಂಜಯ ಸರ್ಜಿ, ಮಾಜಿ ಶಾಸಕರಾದ ಅಶೋಕ್ ನಾಯಕ್, ಕುಮಾರ ಸ್ವಾಮಿ, ಪ್ರಕೋಷ್ಠಗಳ ರಾಜ್ಯ ಸಂಚಾಲಕರಾದ ದತ್ತಾತ್ರಿ, ಜಿಲ್ಲಾಧ್ಯಕ್ಷರಾದ ಟಿ.ಡಿ. ಮೇಘರಾಜ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ದಲಿತ ಮುಖಂಡರು, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

 

- Advertisement -  - Advertisement -  - Advertisement - 
Share This Article
error: Content is protected !!
";