ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶ್ರಾವಣ ಮಾಸದ 3ನೇ ಶನಿವಾರದಂದು ದೊಡ್ಡಬಳ್ಳಾಪುರ ತಾಲೂಕಿನ ಸುಪ್ರಸಿದ್ದ ಚಿಕ್ಕಮಧುರೆ ಶನಿಮಹಾತ್ಮಸ್ವಾಮಿ ದೇವಾಲಯದಲ್ಲಿ ಮಾಜಿ ಕೇಂದ್ರ ಸಚಿವ ದಿವಂಗತ ಆರ್.ಎಲ್.ಜಾಲಪ್ಪ ಅವರ ಕುಟುಂಬ, ಸಮೂಹ ಶಿಕ್ಷಣ ಸಂಸ್ಥೆಗಳು ಮತ್ತು ಲಯನ್ಸ್ ಕ್ಲಬ್ ಆಫ್ ಆರ್.ಎಲ್.ಜಾಲಪ್ಪ ಇನ್ಸ್ಟಿಟ್ಯೂಷನ್ಸ್ ಗಳ ಸಹಯೋಗದಲ್ಲಿ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ಏರ್ಪಾಟಾಗಿತ್ತು.
ಸಾವಿರಾರು ಜನರಿಗೆ ಅನ್ನದಾಸೋಹ ನಡೆಯಿತು. ಬಂದ ಭಕ್ತಾದಿಗಳೆಲ್ಲರಿಗೂ ಕನಸವಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಅಚ್ಚುಕಟ್ಟಾದ ದಾಸೋಹ ವ್ಯವಸ್ಥೆ ಮಾಡಲಾಗಿತ್ತು.
ಶ್ರೀದೇವರಾಜ ಅರಸ್ ವಿದ್ಯಾ ಸಂಸ್ಥೆ ಉಪಾಧ್ಯಕ್ಷ ಜೆ.ರಾಜೇಂದ್ರ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್, ಲಯನ್ಸ್ ಕ್ಲಬ್ ಜಿಎಂಟಿ ಸಂಯೋಜಕ ಎಂ.ಆರ್.ಶ್ರೀನಿವಾಸ್, ವಲಯ ಅಧ್ಯಕ್ಷ ಜೆ.ಆರ್.ರಾಕೇಶ್, ಕ್ಲಬ್ ಅಧ್ಯಕ್ಷ ಕೆ.ಆರ್.ರವಿಕಿರಣ್,
ಜಿಪಂ ಮಾಜಿ ಸದಸ್ಯ ದಯಾನಂದ ಸ್ವಾಮಿ, ಮುಖಂಡರಾದ ರುದ್ರಪ್ಪ, ರೋಜಿಪುರ ಪ್ರಕಾಶ್, ಎಸ್.ದಯಾನಂದ್, ಪುರುಷೋತ್ತಮಗೌಡ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

