ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟದ ಪ್ರಧಾನ ಸಂಚಾಲಕರಾದ ಕೆ.ಎಂ.ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ ನೂರಕ್ಕೂ ಅಧಿಕ ಮಂದಿ ಪದಾಧಿಕಾರಿಗಳು ಮತ್ತು ನಾನಾ ಸಮುದಾಯಗಳ ಮುಖಂಡರು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, “ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ”ಯನ್ನು ಜಾರಿಗೊಳಿಸುವಂತೆ ಮನವಿ ಸಲ್ಲಿಸಿದರು.
ಸದ್ಯ ಉಪಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣೆಯ ಬಳಿಕ ಸಚಿವ ಸಂಪುಟ ಸಭೆಯಲ್ಲಿ ವರದಿ ಕುರಿತು ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ನಿಯೋಗಕ್ಕೆ ಭರವಸೆ ನೀಡಿದರು.